ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ (ETEC) ಶಿಕ್ಷಣ ಸಚಿವಾಲಯದ ಜೊತೆ ಶೈಕ್ಷಣಿಕ ಹಾಗೂ ತರಬೇತಿ ವ್ಯವಸ್ಥೆಗೆ ಮಾನ್ಯತೆ ನೀಡುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬುರ್ಖಾ (Burqa) ಧರಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಘೋಷಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಧರಿಸಬೇಕು. ಎಲ್ಲಾ ಉಡುಪುಗಳೂ ಸಾರ್ವಜನಿಕ ಸಭ್ಯತೆಯ ನಿಯಮಗಳಿಗೆ ಬದ್ಧವಾಗಿರಬೇಕು ಎಂದು ಇಟಿಇಸಿ ಹೇಳಿದೆ. ಆದರೆ ಇಲ್ಲಿ ಹಿಜಬ್ (Hijab) ಬಗ್ಗೆ ಯಾವುದೇ ಪ್ರಸ್ತಾಪ ಮಾಡದೇ ಕೇವಲ ಅಬಯಾವನ್ನು (Abaya) ಮಾತ್ರವೇ ನಿಷೇಧಿಸಲಾಗಿದೆ.
ಅಬಯಾ ಎಂಬುದು ಕತ್ತಿನಿಂದ ಕಾಲಿನ ವರೆಗೆ ದೇಹವನ್ನು ಮುಚ್ಚುವ ವಸ್ತ್ರವಾಗಿದೆ. ಇದು ತಲೆಗೆ ಅನ್ವಯಿಸುವುದಿಲ್ಲ. ಹಿಜಬ್ ಎಂಬುವುದು ತಲೆಯನ್ನು ಮುಚ್ಚುವ ವಸ್ತ್ರವಾಗಿದೆ. ಸಾಂಪ್ರದಾಯಿಕವಾಗಿ ಅಬಯಾಗಳು ಕಪ್ಪು ಬಣ್ಣದ್ದಾಗಿದ್ದು, ತಿಳಿ ನೀಲಿ ಮತ್ತು ಗುಲಾಬಿ ಬಣ್ಣಗಳಲ್ಲಿಯೂ ಹೆಚ್ಚಿನ ಮಹಿಳೆಯರು ಗಲ್ಫ್ನಾದ್ಯಂತ ಧರಿಸುತ್ತಾರೆ.
2018 ರಲ್ಲಿಯೇ ಸೌದಿಯಲ್ಲಿ ಅಬಯಾವನ್ನು ಇನ್ನು ಮುಂದೆ ಕಾನೂನುಬದ್ಧವಾಗಿ ಜಾರಿಗೊಳಿಸಲಾಗುವುದಿಲ್ಲ ಎಂದು ಘೋಷಿಸಲಾಗಿತ್ತು. ಆದರೂ ಹೆಚ್ಚಿನ ಮಹಿಳೆಯರು ಅಬಯಾ ಧರಿಸುವುದನ್ನು ಮುಂದುವರೆಸಿದ್ದಾರೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist