ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಥಳೀಯ ಸಂಸ್ಥೆ ಕಾನೂನು ಜಾರಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಹಿಂದೆ ಬಿದ್ದಿತ್ತು: ಮಣಿಶಂಕರ್‌ ಅಯ್ಯರ್‌

Twitter
Facebook
LinkedIn
WhatsApp
 ಸ್ಥಳೀಯ ಸಂಸ್ಥೆ ಕಾನೂನು ಜಾರಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಹಿಂದೆ ಬಿದ್ದಿತ್ತು: ಮಣಿಶಂಕರ್‌ ಅಯ್ಯರ್‌

ಬೆಂಗಳೂರು: ಪಂಚಾಯತಿ ರಾಜ್‌ ಕಾನೂನುಗಳನ್ನು ಜಾರಿ ಮಾಡುವಲ್ಲಿ, ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಸರ್ಕಾರ ಹಿಂದೆ ಬಿದ್ದಿತ್ತು ಎಂದು ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅಯ್ಯರ್ ಹೇಳಿದ್ದಾರೆ.

ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ಮಣಿ ಶಂಕರ್ ಅಯ್ಯರ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ‘ಈ ವೇಳೆ ಪಂಚಾಯತಿ ರಾಜ್‌ ಕಾನೂನುಗಳನ್ನು ಜಾರಿ ಮಾಡುವಲ್ಲಿ, ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸರ್ಕಾರ ಹಿಂದೆ ಬಿದ್ದಿತ್ತು. ನಿರೀಕ್ಷಿತ ವೇಗದಲ್ಲಿ ಕೆಲಸ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಆಡಳಿತ ವಿಕೇಂದ್ರೀಕರಣಕ್ಕೆ ಒತ್ತು ನೀಡಿದ್ದರು. ದೇಶದಲ್ಲೇ ಅನುಷ್ಠಾನಕ್ಕೆ ಮೊದಲನೆಯದಾಗಿ ಒತ್ತು ನೀಡಿದ ರಾಜ್ಯ ಕರ್ನಾಟಕ. ಅಬ್ದುಲ್‌ ನಜೀರ್‌ ಸಾಬ್‌ ಅವರು ರಾಜೀವ್‌ಗಾಂಧಿ ಅವರಿಂದ ಸಾಕಷ್ಟು ಮಾರ್ಗದರ್ಶನ ಪಡೆದರು. ಕರ್ನಾಟಕದಲ್ಲಿ ಇಂದಿಗೂ ಪಂಚಾಯತ್‌ ರಾಜ್‌ ಸಂಸ್ಥೆಗಳು ಕ್ರಿಯಾಶೀಲವಾಗಿವೆ. ತಳಮಟ್ಟದಲ್ಲಿ ಆಡಳಿತಕ್ಕೆ, ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ಮಣಿಶಂಕರ್ ಅಯ್ಯರ್ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಪಂಚಾಯತಿ ರಾಜ್‌ ಕಾನೂನು ಜಾರಿಯಲ್ಲಿ ಎದುರಾದ ಸಮಸ್ಯೆಗಳನ್ನು ಅಧ್ಯಯನ ನಡೆಸಲು ಕರ್ನಾಟಕ ಸರ್ಕಾರ ಪ್ರಯತ್ನ ಮಾಡಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ರಚಿಸಿದ್ದ ರಮೇಶ್‌ ಕುಮಾರ್‌ ಸಮಿತಿಯು ಕಾನೂನನ್ನು ಅತ್ಯಂತ ಆಳವಾಗಿ ಅಧ್ಯಯನ ನಡೆಸಿ ವರದಿ ನೀಡಿತು. ಈ ವರದಿ ಆಧಾರದಲ್ಲಿ, ದೇಶದಲ್ಲೇ ಅತ್ಯುತ್ತಮ ಎನ್ನಬಹುದಾದ ಕಾನೂನನ್ನು ರೂಪಿಸಲಾಗಿದೆ. ಆದರೆ ಬೇಸರದ ಸಂಗತಿ ಎಂದರೆ, ಆಗಿನ ಕಾಂಗ್ರೆಸ್‌ ಸರ್ಕಾರ, ಈ ಕಾನೂನು ಜಾರಿಗೆ ಅಗತ್ಯ ವೇಗವನ್ನು ನೀಡಲಿಲ್ಲ. ಸಹಜವಾಗಿಯೇ, ಮುಂದೆ ಬಂದ ಕಾಂಗ್ರೆಸ್ಸೇತರ ಸರ್ಕಾರವೂ ಇದೇ ಧೋರಣೆಯನ್ನು ಮುಂದುವರಿಸಿತು ಎಂದರು.

ಅತ್ಯುತ್ತಮ ಕಾನೂನನ್ನು ರೂಪಿಸಲಾಯಿತು, ಅದರ ಉಪಯೋಗಗಳೇನು ಎನ್ನುವುದೂ ನಿಮಗೆ ಗೊತ್ತಿತ್ತು. ಆದರೆ ಅದನ್ನು ಜಾರಿ ಮಾಡಲು ಅಗತ್ಯ ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ. ಇದು ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ಸರ್ಕಾರಕ್ಕೂ ಅನ್ವಯವಾಗುತ್ತದೆ ಎಂದು ಅಯ್ಯರ್ ಬೇಸರ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ