ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಕಳೆದು ಹೋಗಿರುವ ಸ್ಥಾನಗಳನ್ನು ಕಾಂಗ್ರೆಸ್ ಮರಳಿ ಪಡೆದಿತೆ?
ಶಿವಮೊಗ್ಗ: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ, ಕಾಂಗ್ರೆಸ್ಸಿಗೆ ಹಿನ್ನಡೆ ತಂದ ಜಿಲ್ಲೆಗಳಲ್ಲಿ ಒಂದು.
ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಮೇರು ನಾಯಕ ಬಿಎಸ್ ಯಡಿಯೂರಪ್ಪನವರ ಹಾಗೂ ಹಿರಿಯ ನಾಯಕ ಕೆಎಸ್ ಈಶ್ವರಪ್ಪನವರ ತವರು ಜಿಲ್ಲೆಯಾಗಿರುವ ಶಿವಮೊಗ್ಗ ಜಿಲ್ಲೆ ಕಳೆದ ಬಾರಿ ಬಿಜೆಪಿಗೆ ಹೆಚ್ಚಿನ ಸ್ಥಾನವನ್ನು ತಂದು ಕೊಟ್ಟಿದ್ದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿತು.
ಈ ಬಾರಿ ರಾಜಕೀಯ ವಿಶ್ಲೇಷಕರ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ನಡೆಯಬಹುದು ಎಂದು ಅಂದಾಜಿಸಲಾಗಿದೆ.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ್ದಾರೆ. ಕೆಎಸ್ ಈಶ್ವರಪ್ಪನವರಿಗೆ ಈಗ ಮಂತ್ರಿ ಸ್ಥಾನವೂ ಇಲ್ಲ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಶಿವಮೊಗ್ಗ ಜಿಲ್ಲೆಯಲ್ಲಿ ತಕ್ಕಮಟ್ಟಿನ ಒಗ್ಗಟ್ಟನ್ನು ಪ್ರದರ್ಶಿಸುತ್ತಿದೆ. ಕಳೆದ ಬಾರಿ ಕರಾವಳಿಯಲ್ಲಿ ಬೀಸಿದ ಹಿಂದುತ್ವದ ಶಿವಮೊಗ್ಗ ಜಿಲ್ಲೆಗೂ ತಟ್ಟಿತು. ಇದರಿಂದ ಬಹುತೇಕ ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದುಕೊಂಡಿತ್ತು.
ಆದರೆ ಈ ಬಾರಿ ಹಿಂದುತ್ವದ ಅಲೆ ಅಷ್ಟಾಗಿ ಕಂಡು ಬರುತ್ತಿಲ್ಲ, ಆದರೆ ಕೊನೆ ಕ್ಷಣದಲ್ಲಿ ಏನಾಗುತ್ತದೆ ಎಂಬುದನ್ನು ಹೇಳಲು ಸಾಧ್ಯ ಇಲ್ಲ ಎಂದು ರಾಜಕೀಯ ವಿಶ್ಲೇಷಕರ ಸ್ಪಷ್ಟ ಅಭಿಪ್ರಾಯ. ಆದರೆ ಕಳೆದ ಬಾರಿ ಅನುಭವಿಸಿದ ನಷ್ಟವನ್ನು ಕಾಂಗ್ರೆಸ್ ಈ ಬಾರಿ ಅನುಭವಿಸಲಿಕ್ಕಿಲ್ಲ ಎಂದು ಶಿವಮೊಗ್ಗ ಜಿಲ್ಲೆ ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣೆ ಖಂಡಿತ ನಡೆಯುತ್ತದೆ ಎಂದು ರಾಜಕೀಯ ವಿಶ್ಲೇಷಕರು ಸ್ಪಷ್ಟವಾಗಿ ಹೇಳುತ್ತಾರೆ.