ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಥಿರತೆ ಕಾಯ್ದುಕೊಂಡ ಚಿನ್ನ-ಬೆಳ್ಳಿ ದರ, ಇಂದಿನ ಚಿನ್ನ-ಬೆಳ್ಳಿಯ ದರ ಇಲ್ಲಿ ತಿಳಿಯಿರಿ

Twitter
Facebook
LinkedIn
WhatsApp
ಸ್ಥಿರತೆ ಕಾಯ್ದುಕೊಂಡ ಚಿನ್ನ-ಬೆಳ್ಳಿ ದರ, ಇಂದಿನ ಚಿನ್ನ-ಬೆಳ್ಳಿಯ ದರ ಇಲ್ಲಿ ತಿಳಿಯಿರಿ

Gold Rate on April 9th 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಮಹಿಳೆಯರು ಆಭರಣ ಪ್ರಿಯರಾದ್ದು, ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ಷೇರು ಮಾರುಕಟ್ಟೆಯ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ  ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇನ್ನು, ದೇಶಾದ್ಯಂತ ಬೆಳ್ಳಿ ಬೆಲೆಯಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,585
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,092

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,680
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 48,736

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,850
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,920

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,58,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,09,200

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,850 ಆಗಿದ್ದು, ನಿನ್ನೆ ಸಹ ಇಷ್ಟೇ ದರ ಇತ್ತು. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 56,400, ರೂ. 55,800 ಹಾಗೂ ರೂ. 55,800 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಭಾನುವಾರ 55,950 ರೂ. ಆಗಿದ್ದು, ನಿನ್ನೆ ಸಹ ಇಷ್ಟೇ ಬೆಲೆ ಇತ್ತು.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಹಾಗೆ, ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 802, ರೂ. 8,020 ಹಾಗೂ ರೂ. 80,200 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,200 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 76,600 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 76,600 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 76,600 ರೂ. ಆಗಿದ್ದು, ದೇಶಾದ್ಯಂತ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ