ಸೋಮವಾರ, ಜನವರಿ 20, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ

Twitter
Facebook
LinkedIn
WhatsApp
ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ

ಸ್ನೇಹಿತೆಯರ ಜತೆ ಸೆಲ್ಫಿ

ತುಮಕೂರು: ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ಹಂಸ (20)ಎಂಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ. 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿ ಬದುಕಿ ಬಂದಿದ್ದಾರೆ.

NAYAN BAKERY

ಹಂಸ (19) ಆಪತ್ತಿಗೆ ಸಿಲುಕಿದ್ದ ವಿದ್ಯಾರ್ಥಿನಿ. ಗುಬ್ಬಿ ತಾಲೂಕು ಶಿವರಾಂಪುರದ ನಿವಾಸಿ ಸೋಮನಾಥ್‌ ಅವರ ಪುತ್ರಿ ಹಂಸ ಅವರು ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾರೆ.

ಗುಬ್ಬಿ ತಾಲೂಕು ಶಿವರಾಂಪುರದ ನಿವಾಸಿ ಸೋಮನಾಥ್‌ ಅವರ ಪುತ್ರಿ ಹಂಸ ಅವರು ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾರೆ. ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಹೋಗಿ, ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಡ ರಾತ್ರಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಆದರೆ ಆಕೆ ಸಿಲುಕಿರುವ ಜಾಗಕ್ಕೆ ಹೋಗುವುದು ಸವಾಲಿನ ಕೆಲಸವಾಗಿತ್ತು. ಹತ್ತಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಕೋಡಿ ಹರಿಯುವ ಭಾಗದಲ್ಲಿ ಸುಮಾರು ಹದಿನೈದು ಅಡಿ ಆಳದಲ್ಲಿರುವ ಕಲ್ಲಿನ ಬಂಡೆ ನಡುವೆ ಹಂಸ ಸಿಲುಕಿರಬಹುದು ಎಂದು ಶಂಕಿಸಲಾಗಿತ್ತು. ಅದೀಗ ನಿಜವಾಗಿದೆ. ಕೋಡಿ ನೀರು ರಭಸದಿಂದ ಹರಿಯುತ್ತಿರುವ ಕಾರಣ, ಆಕೆಯ ಪತ್ತೆ ಹಾಗೂ ರಕ್ಷಣೆಗೆ ತೊಡಕಾಗಿತ್ತು. ಕೆರೆ ಕೊಡಿಯ ನೀರನ್ನು ಬೇರೆಡೆಗೆ ತಿರುಗಿಸುವ ಮೂಲಕ, ಆಕೆ ಸಿಲುಕಿದ್ದ ಕಲ್ಲಿನ ಪೊಟರೆಯ ಜಾಗಕ್ಕೆ ನೀರು ಹೋಗದಂತೆ ನೋಡಿಕೊಂಡು, ಬಳಿಕ ರಕ್ಷಣಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲಾಯಿತು. ಭಾನುವಾರ ರಕ್ಷಣಾ ಕಾರ್ಯ ಸ್ಥಗಿತಗೊಳಿಸಿದ್ದ ಅಗ್ನಿಶಾಮಕ ಸಿಬ್ಬಂದಿ, ಸೋಮವಾರ ಘಟನೆ ನಡೆದ ಮಂದಾರಗಿರಿ ಬೆಟ್ಟದ ಬಳಿ ಮೈದಾಳ ಕೆರೆ ಕೋಡಿ ಸ್ಥಳಕ್ಕೆ ಮತ್ತೆ ತೆರಳಿದ್ದು, ಬೆಳಿಗ್ಗೆಯಿಂದ ರಕ್ಷಣಾ ಕಾರ್ಯಾಚರಣೆ ಪುನಾರಂಭಿಸಿದ್ದರು.

ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು: ವಾರ್ನ್​ ಮಾಡಿದ್ದಕ್ಕೆ ಹತ್ಯೆಗೈದ!

ಕೋಲಾರ: ಅವರಿಬ್ಬರು ದೂರದ ಸಂಬಂಧಿಗಳು‌. ಅದರಲ್ಲೂ ಸ್ನೇಹಿತರು ಮನೆಗೆ ಬರುತ್ತಿದ್ದ ಸ್ನೇಹಿತ ತನ್ನ ಅತ್ತಿಗೆ ಮೇಲೆ ಕಣ್ಣಾಕಿದ ವಿಷಯ ತಿಳಿದು ಎಚ್ಚರಿಕೆ ನೀಡಿದ್ದ. ಆದರೆ ಅಷ್ಟಕ್ಕೆ ಸುಮ್ಮನಾಗದ ಸ್ನೇಹಿತ ಎಚ್ಚರಿಕೆ ನೀಡಿದ್ದ ಸ್ನೇಹಿತನ ಎದೆಗೆ‌ ಚೂರಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ಜಮಾಲ್ ಷಾ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ರೋಹಿದ್​ ಅಲಿಯಾಸ್ ಅರ್ಬಾಜ್(26) ಮೃತ ಸ್ನೇಹಿತ.

ಜಮಾಲ್ ಷಾ ನಗರದಲ್ಲಿ ನಿನ್ನೆ ತಡರಾತ್ರಿ ಸುಲ್ತಾನ್​ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್​ ಅಲಿಯಾಸ್ ಅರ್ಬಾಜ್​ನನ್ನು ಕೊಲೆ‌ ಮಾಡಿದ್ದಾನೆ. ಅಷ್ಟಕ್ಕೂ ಆಗಿದ್ದೇನು ಅಂತ ನೋಡುವುದಾದರೆ, ರೋಹಿದ್​ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು.

ಹೀಗಿರುವಾಗ‌ ಅಮ್ಜಾದ್ ಆಗಾಗ ರೋಹಿದ್​ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್​ ಅಣ್ಣನ ಹೆಂಡತಿ ಅಂದರೆ ಅತ್ತಿಗೆ‌ ಮೇಲೆ‌ ಕಣ್ಣು‌ ಹಾಕಿದ್ದಾನೆ. ರೋಹಿದ್​​ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್​ ಪಡೆದುಕೊಂಡು ಆಗ್ಗಾಗ ಫೋನ್​  ಹಾಗೂ ವಿಡಿಯೋ ಕಾಲ್​ ಮಾಡಿ‌‌‌ ರೋಹಿದ್​ ಅತ್ತಿಗೆಗೆ ಪಿಡಿಸುತ್ತಿದ್ದನಂತೆ. ಈ ವಿಷಯ ತಿಳಿದ ರೋಹಿದ್​ ಮತ್ತು ಸಂಬಂಧಿಕರು ಕಳೆದ ಎರಡು ತಿಂಗಳ‌ ಹಿಂದೆ ಅಮ್ಜಾದ್‌ ಮನೆ ಬಳಿ ಹೋಗಿ‌ ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.

ಇಷ್ಟಾದರೂ ಅಮ್ಜಾದ್​ ಮಾತ್ರ ತನ್ನ ದುರ್ಬುದ್ದಿಯನ್ನು ನಿಲ್ಲಿಸಿರಲಿಲ್ಲ. ಎರಡು ತಿಂಗಳು ಸುಮ್ಮನಿದ್ದು ಮತ್ತೆ ಅವರ ಅತ್ತಿಗೆಗೆ ಫೋನ್​ ಮಾಡೋದಕ್ಕೆ ಶುರುಮಾಡಿದ್ದಾನೆ. ಅಷ್ಟೇ ಅಲ್ಲದೆ ಅಮ್ಜಾದ್ ಕಳೆದ ಮೂರು ದಿನಗಳ‌ ಹಿಂದೆ ರೋಹಿದ್ ಎದುರಲ್ಲಿಯೇ ಅವರ ಅತ್ತಿಗೆಗೆ ವಿಡಿಯೋ ಕಾಲ್ ಮಾಡಿದ್ದಾನೆ. ‌ಇದನ್ನು ನೋಡಿದ್ದ ರೋಹಿದ್​ ಗಲಾಟೆ ಮಾಡಿ ವಾರ್ನಿಂಗ್​ ಮಾಡಿದ್ದ. ಇದಕ್ಕೆ ಅಮ್ಜಾದ್​ ಕೂಡ ಕೋಪ ಮಾಡಿಕೊಂಡಿದ್ದ.

ಇನ್ನು ನಿನ್ನೆ ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್​ ರಾತ್ರಿ ವಾಸಪ್ ಬರುತ್ತಿದ್ದಂತೆ ನಿನ್ನ ಜೊತೆಗೆ ಮಾತನಾಡಬೇಕು ಬಾ ಎಂದು ಅಮ್ಜಾದ್​ ಜಮಾಲ್​ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್​​ ಎದೆಗೆ ಚಾಕುವಿನಿಂದ ಇರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ಷಿಪ್ರಕಾರ್ಯಾಚರಣೆ ನಡೆಸಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಮ್ಜದ್​ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಇತ್ತ ಮಾಡಿದ ತಪ್ಪನ್ನು ಪ್ರಶ್ನೆ ಮಾಡಿದ್ದಕ್ಕೆ ರೋಹಿದ್​ ಕುಟುಂಬ ಇವತ್ತು ಅನಾಥವಾಗಿ ಕಣ್ಣೀಕು ಹಾಕುವಂತಾಗಿದೆ.

ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಆಕೆಯ ಮಗುವನ್ನು ಅಪಹರಿಸಿದ್ದ ತಮ್ಮ ಪೊಲೀಸರ ವಶಕ್ಕೆ:

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ಹೋಗಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ತರುಣ್(17) ಬಂಧಿತ ಬಾಲಕ ಗೋಯಲ್(3) ಅಪಹರಣಕ್ಕೊಳಗಾದ ಮಗು. ಬೆಂಗಳೂರಿನಲ್ಲಿ ಅಕ್ಕ ವ್ಯಕ್ತಿಯೊಬ್ಬನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡು ಅವನೊಂದಿಗೆ ವಾಸಿಸುತ್ತಿದ್ದಳು. ಈ ವಿಚಾರ ತಮ್ಮನಿಗೆ ಗೊತ್ತಾಗಿದೆ. ಅಕ್ರಮ ಸಂಬಂಧ ಬಿಡುವಂತೆ ಹೇಳಿದ್ದ. ಆದರೆ ತಮ್ಮನ ಮಾತಿಗೆ ಕಿವಿಗೊಡದೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿದ್ದರು ಎನ್ನಲಾಗಿದೆ  ಇದರಿಂದ ಅಕ್ಕನ ನಡೆ ಬಗ್ಗೆ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ಪರಾರಿಯಾಗಿದ್ದ ಬಾಲಕ. ಆತಂಕಗೊಂಡು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದ ಮಗುವಿನ ತಾಯಿ.

ತಕ್ಷಣ ಕಾರ್ಯಪ್ರವೃತ್ತರಾದ ಬೆಂಗಳೂರು ಪೊಲೀಸರು. ಮಗುವಿನೊಂದಿಗೆ ಬಾಲಕ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಟ್ರೈನ್‌ನಲ್ಲಿ ಪ್ರಯಾಣಿಸುತ್ತಿರುವ ವಿಚಾರ ಗೊತ್ತಾಗಿದೆ. ತಕ್ಷಣ ಅಲ್ಲಿಂದ ದಾವಣಗೆರೆ ರೈಲ್ವೆ ಆರ್‌ಪಿಎಫ್ ಪೊಲೀಸರಿಗೆ ಮಾಹಿತಿ ನೀಡಿದ ಬೆಂಗಳೂರು ಪೊಲೀಸರು. ಇತ್ತ ದಾವಣಗೆರೆಯಲ್ಲಿ ಇನ್ಸ್‌ಪೆಕ್ಟರ್ ಎಕೆ ರೆಡ್ಡಿ ಹಾಗೂ ಸಿಬ್ಬಂದಿ ಶಿವಾನಂದ, ಅಮಿತ್, ಬಿಂದು ಮಾಧುರಿ ಚುರುಕಾಗಿದ್ದಾರೆ. ದಾವಣಗೆರೆಗೆ ನಿಜಾಮುದ್ದಿನ್ ಎಕ್ಸ್‌ಪ್ರೆಸ್ ಟ್ರೈನ್ ಬರುತ್ತಿದ್ದಂತೆ ಪ್ರಯಾಣಿಕರ ತಪಾಸಣೆ ನಡೆಸಿದ ಪೊಲೀಸರು.  ಟ್ರೈನ್‌ನಿಂದ ಮಗುವಿನೊಂದಿಗೆ ಕೆಳಗಿಳಿಯುತ್ತಿದ್ದಂತೆ ಬಾಲಕ ಮತ್ತು ಮಗುವಿನ ರಕ್ಷಣೆ ಮಾಡಿದ ಪೊಲೀಸರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist