ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಟಪೋರಿ ಸತ್ಯ ನಿಧನ: ಚಿತ್ರರಂಗಕ್ಕೆ ಮತ್ತೊಂದು ಆಘಾತ!

Twitter
Facebook
LinkedIn
WhatsApp
tapori satya

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತ್ನಿ, ಮೂವರು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. 

ಟಪೋರಿ ಸತ್ಯ ಅವರು ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಟಪೋರಿ ಸತ್ಯ ಅವರು ಮನೆಗೆ ಆಧಾರವಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದು ಮಗನ ಪಾರ್ಥಿವ ಶರೀರದ ಮುಂದೆ ಕುಳಿತು ತಾಯಿ ರುಕ್ಕಮ್ಮ ಕಣ್ಣೀರಿಡುತ್ತಿದ್ದಾರೆ. ಇನ್ನು ಬನಶಂಕರಿ ಮೂರನೇ ಹಂತದಲ್ಲಿ ಇರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 

ಅಗ್ನಿಸಾಕ್ಷಿ ಧಾರವಾಹಿಯ ನಟ ಸಂಪತ್‌ ಆತ್ಮಹತ್ಯೆಗೆ ಶರಣು: ಕನ್ನಡದ ಜನಪ್ರಿಯ ಅಗ್ನಿಸಾಕ್ಷಿ ಧಾರಾವಾಹಿಯ ನಟನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೆಲಮಂಗಲ ನಿವಾಸಿ ಸಂಪತ್‌ ಜಯರಾಮ್‌(35) ಆತ್ಮಹತ್ಯೆಗೆ ಶರಣಾದ ನಟ. ನೆಲಮಂಗಲದ ನಿವಾಸದಲ್ಲಿ ಶನಿವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಂಪತ್‌ ಜಯರಾಮ್‌ ಅವರು ಧಾರಾವಾಹಿ ಹಾಗೂ ಕೆಲ ಸಿನಿಮಾಗಳಲ್ಲಿ ನಡೆಸಿದ್ದಾರೆ. ವರ್ಷದ ಹಿಂದೆಯಷ್ಟೇ ಸಂಪತ್‌ ಜಯರಾಮ್‌ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಧಾರವಾಹಿ ಹಾಗೂ ಸಿನಿಮಾಗಳಲ್ಲಿ ಅವಕಾಶಗಳ ಕೊರತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನೆಲಮಂಗಲ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ