ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ನ್ನಡದಲ್ಲಿ ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ ಚಿತ್ರೋದ್ಯಮಕ್ಕೆ ತಿಳಿಯುತ್ತಿದ್ದಂತೆಯೇ ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ. ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

 

ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ