ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಣಕಾಸಿನ ಜಗಳ ಮಧ್ಯೆ ಪ್ರವೇಶಿಸಿದ ಪೊಲೀಸರ ಮೇಲೆ ಹಲ್ಲೆ: ಯುವತಿಯರು ಸೇರಿ ನಾಲ್ವರ ಬಂಧನ

Twitter
Facebook
LinkedIn
WhatsApp
ಹಣಕಾಸಿನ ಜಗಳ ಮಧ್ಯೆ ಪ್ರವೇಶಿಸಿದ ಪೊಲೀಸರ ಮೇಲೆ ಹಲ್ಲೆ: ಯುವತಿಯರು ಸೇರಿ ನಾಲ್ವರ ಬಂಧನ

ದಾವಣಗೆರೆ (ಜ.26): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಯುವತಿಯರು ಹಾಗು ಯುವಕರ ನಡುವೆ ನಡೆದ ಜಗಳವನ್ನು ಬಿಡಿಸಲು ಮಧ್ಯೆ ಪ್ರವೇಶಿಸಿದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಯುವತಿ ಹಲ್ಲೆ ಮಾಡಿರುವ ಘಟನೆ ಕಳೆದ ದಿನ ತಡರಾತ್ರಿ ಜರುಗಿದೆ. ಇನ್ನು ಹಲ್ಲೇ ಮಾಡಿದ ಬೇನಲ್ಲೇ ಮಹಿಳಾ ಪೋಲಿಸ್ ಕಾನ್ಸ್‌ಟೇಬಲ್‌ಗೆ ಕೈಗೆ ಗಾಯಗಳಾಗಿದ್ದು, ಘಟನೆ ಸಂಬಂಧ ಪೋಲಿಸರು ನಾಲ್ವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. 

 

ಇನ್ನು ಈ ಘಟನೆ ದಾವಣಗೆರೆಯ ವಿದ್ಯಾನಗರದ ಕೊನೆ ಬಸ್ ಸ್ಟಾಪ್ ಬಳಿ ಕಳೆದ ದಿನ‌ತಡರಾತ್ರಿ ಜರುಗಿದೆ. ಇಬ್ಬರು ಯುವತಿಯರು, ಮಂಜುನಾಥ ಮತ್ತು ಹರ್ಷಾ ಎಂಬುವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮಹಾರಾಷ್ಟ್ರ ಮೂಲದ  ಯುವತಿಯರನ್ನು ನಗರಕ್ಕೆ ಕರೆಸಿ ವೇಶ್ಯಾವಾಟಿಕೆಗೆ ತಳ್ಳುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಕೊಡಮಾಡುವ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯ ಹಿನ್ನಲ್ಲೇ ಹಿಂದೆ ಹೈಟೆಕ್ ವೇಶ್ಯಾವಾಟಿಕೆ ಕರಿನೆರಳು: ದಾವಣಗೆರೆಯ ಯೋಗೀಶ್, ಕುಮಾರ್ ನಾಯ್ಕ್, ಹೇಮರಾಜ್ ಅವರ ಜೊತೆ ಪೋನ್ ಸಂಪರ್ಕದಲ್ಲಿದ್ದ ಮಹಾರಾಷ್ಟ್ರ ಮೂಲದ ಯುವತಿಯರು ದಾವಣಗೆರೆಗೆ ಆಗಮಿಸಿದ್ದರು. ಮಂಗಳವಾರ ತಡ ರಾತ್ರಿ ಗಿರಾಕಿಗಳಾದ ಶಿವಮೊಗ್ಗ ಮೂಲದ ಹರೀಶ್ ಮತ್ತು ಮಂಜುನಾಥ್ ಜೊತೆ ವಿದ್ಯಾನಗರದ ಲಾಸ್ಟ್ ಬಸ್‌ಸ್ಟಾಪ್‌ನಲ್ಲಿ ಕಿತ್ತಾಡಿಕೊಂಡಿದ್ದಾರೆ. 

ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಪೊಲೀಸರು. ಜಗಳ ಬಿಡಿಸಲು ಮುಂದಾದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆ ವೇಳೆ ಓರ್ವ ಮಹಿಳಾ ಪೊಲೀಸ್ ಕಾನ್ಸಟೇಬಲ್‌ಗೆ ಗಾಯವಾಗಿದ್ದು, ಕುಡಿದ ಮತ್ತಿನಲ್ಲಿದ್ದ ಯುವತಿಯರು ಗಲಾಟೆ ಎಬ್ಬಿಸಿ ರಾದ್ದಾಂತ ಮಾಡಿದ್ದಾರೆ. ಕೊನೆಗೆ ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಎಸ್ಪಿ ಸಿಬಿ‌ ರಿಷ್ಯಂತ್ ಹೇಳಿದ್ದೇ‌ನು?: ವಿದ್ಯಾನಗರ ಠಾಣೆ ಆಗಮಿಸಿದ ಇಬ್ಬರು ಯುವತಿಯರು ಹುಡುಗರು ತೊಂದರೆ ಕೊಡ್ತಿದ್ದಾರೆಂದು ದೂರುಕೊಡಲು ಮುಂದಾಗಿದ್ರು, ವಿಚಾರಣೆ ನಡೆಸಿದಾಗ ಪೋಲಿಸರ ಮೇಲೆ ಹಲ್ಲೆ ನಡೆಸಿದ್ದರು, ವಿಚಾರಣೆ ನಡೆಸಿದಾಗ ಅವರಿಬ್ಬರೂ ಮುಂಬೈ ಮೂಲದ ಯುವತಿಯರು, ಯೋಗೆಶ್ ಎಂಬುವನು ಮುಂಬೈನಿಂದ ಇಬ್ಬರು ಯುವತಿಯರನ್ನು ಕರೆದುಕೊಂಡು ಬಂದಿದ್ದಾ, ಯುವತಿರನ್ನು ಬಳಸಿಕೊಂಡಿದ್ದಾರೆ ಎಂದು ಯುವತಿಯರು ವಿಚಾರಣೆಯಲ್ಲಿ ಮಾಹಿತಿ ನೀಡಿದ ಬೆನ್ನಲ್ಲೇ ಯೋಗೇಶ್, ಕುಮಾರ್ ನಾಯ್ಕ್, ಹೇಮರಾಜ್ ವಿರುದ್ಧ ಹಾಗು ಪೋಲಿಸರ ಮೇಲೆ ಹಲ್ಲೆ‌ ಮಾಡಿದ ಯುವತಿಯರ ಮೇಲೆ ಎರಡು ಪ್ರಕರಣ ದಾಖಲಾಗಿದೆ. ಇನ್ನು ಇವೆಂಟ್ ಮ್ಯಾನೇಜ್ಮೆಂಟ್‌ಗೆ ಕರೆಸಲಾಗಿತ್ತು ಎಂದು ಹೇಳಲಾಗುತ್ತಿದ್ದು, ತನಿಖೆ ಬಳಿಕ ಮಾಹಿತಿ ಹೊರಬರಬೇಕಿದೆ ಎಂದು ಎಸ್ಪಿ ಸಿಬಿ ರಿಷ್ಯಂತ್ ಮಾಹಿತಿ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ