ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಬ್ಯುಸಿ
ಕಂಗನಾ ಸದ್ಯ ಎಮರ್ಜೆನ್ಸಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾಗಾಗಿ ಕಂಗನಾ ಸಂಸತ್ ಭವನದಲ್ಲಿ ಶೂಟ್ ಮಾಡಲು ಅನುಮತಿ ಕೇಳಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಈ ಸಿನಿಮಾದ ಕೆಲವು ಪ್ರಮುಖ ಭಾಗಗಳನ್ನು ಸಂಸತ್ ಭವನದೊಳಗೆ ಶೂಟ್ ಮಾಡಲು ಅವಕಾಶ ಕೋರಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ಮೊದಲ ಬಾರಿಗೆ ಸಂಸತ್ತಿನಲ್ಲಿ ಚಲನಚಿತ್ರವನ್ನು ಚಿತ್ರೀಕರಿಸಲು ಅನುಮತಿ ಕೊಡಲಾಗುತ್ತಿದೆ ಎನ್ನುವ ಮಾತು ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಈ ಸುದ್ದಿಗೆ ಪ್ರತಿಕ್ರಿಯೆ ನೀಡಿದ್ದ ನೀಡಿದ್ದ ಕಂಗನಾ, ‘ಇದು ನಿಜವಲ್ಲ, ಇದು ಫೇಕ್ ಸುದ್ದಿ’ ಎಂದು ಹೇಳಿದ್ದರು.
‘ಎಮರ್ಜೆನ್ಸಿ’ ಚಿತ್ರವನ್ನು ಕಂಗನಾ ಅವರೇ ಬರೆದು, ನಿರ್ಮಾಣ ಮಾಡಿ, ನಿರ್ದೇಶನ ಮಾಡಿ, ಅವರೇ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಂಗನಾ ರಣಾವತ್ ಅವರ ವೃತ್ತಿಜೀವನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ಬಹುಮುಖ್ಯ ಆಗಲಿದೆ. ಅದಕ್ಕಾಗಿ ಅವರು ಸಖತ್ ತಯಾರಿ ಮಾಡಿಕೊಂಡು ಶೂಟಿಂಗ್ ಆರಂಭಿಸಿದ್ದಾರೆ. ಕಂಗನಾ ವಿಭಿನ್ನ ಪಾತ್ರ ಆಯ್ಕೆ ಮಾಡಿಕೊಂಡಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಇಂದಿರಾ ಪಾತ್ರಕ್ಕೆ ಬಣ್ಣ ಹಚ್ಚಿರುವ ಕಂಗನಾ ಲುಕ್ ಕೂಡ ಎಲ್ಲರ ಹೃದಯ ಗೆದ್ದಿತ್ತು. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist