ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಡಿಕೆಶಿ ಬ್ರದರ್ಸ್ ಗೆ ಟಾಂಗ್ ನೀಡಿದ ಕುಮಾರಸ್ವಾಮಿ

Twitter
Facebook
LinkedIn
WhatsApp
ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು . ಡಿಕೆಶಿ ಬ್ರದರ್ಸ್ ಗೆ ಟಾಂಗ್ ನೀಡಿದ ಕುಮಾರಸ್ವಾಮಿ

ಬೆಂಗಳೂರು: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿದ್ದ ವೇದಿಕೆಯಲ್ಲೇ ನಡೆದ ವಾಕ್ಸಮರ ಕುರಿತಂತೆ ಕಾಂಗ್ರೆಸ್ ನಾಯಕ ಡಿ.ಕೆ ಸಹೋದರರ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಮುಖಂಡ , ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ” ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ …ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ಹೇಳಿದ್ದಾರೆ.

“ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ. ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ” ಎಂದು ಹೇಳಿದ್ದಾರೆ
ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಕುಹಕವಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು