ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹನುಮಂತನ ಚಿತ್ರದ ಎದುರೇ ಬಿಕಿನಿ ತೊಟ್ಟು ಮಹಿಳೆಯರ ದೇಹದಾರ್ಢ್ಯ ಸ್ಪರ್ಧೆ – ರಾಜಕೀಯ ಪಕ್ಷಗಳ ಕಿತ್ತಾಟ

Twitter
Facebook
LinkedIn
WhatsApp
file722tw9ujyn61cbb3n29j1538053113 1

ಭೋಪಾಲ್: ಹನುಮಂತನ (Hanuman) ಚಿತ್ರದ ಎದುರೇ ಬಿಕಿನಿ (Bikini) ತೊಟ್ಟು ಮಹಿಳೆಯರ ದೇಹದಾಢ್ಯ ಸ್ಪರ್ಧೆ (Women Bodybuilding Competition) ನಡೆಸಲಾಗಿದ್ದು, ಬಳಿಕ ವಿವಾದ ಭುಗಿಲೆದ್ದಿದೆ. ಈ ಬಗ್ಗೆ ರಾಜಕೀಯ ಪಕ್ಷಗಳು ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿವೆ.

ಮಧ್ಯಪ್ರದೇಶದ (Madhya Pradesh) ರತ್ಲಾಮ್‌ನಲ್ಲಿ ನಡೆದ ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ದೇಹದಾರ್ಢ್ಯ ಪಟುಗಳು ಭಗವಾನ್ ಹನುಮಂತನ ಚಿತ್ರದ ಎದುರು ಬಿಕಿನಿಯಲ್ಲಿ ಪ್ರದರ್ಶನ ನೀಡಿದ್ದಾರೆ. ಘಟನೆ ಬಳಿಕ ಕಿಡಿ ಕಾರಿರುವ ಕಾಂಗ್ರೆಸ್ (Congress), ಈ ಕಾರ್ಯಕ್ರಮ ಹಿಂದೂ (Hindu) ಭಾವನೆಗಳಿಗೆ ನೋವುಂಟು ಮಾಡಿದೆ. ಇದು ದೇವರಿಗೆ ಮಾಡಿರುವ ಅವಮಾನ, ಈ ಕೂಡಲೇ ಕಾರ್ಯಕ್ರಮದ ಆಯೋಜಕರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದೆ.

ಈ ನಡುವೆ ಸಮಾಜವಾದಿ ಪಕ್ಷವೂ ಕೂಡಾ ಈ ಕಾರ್ಯಕ್ರಮ ಹಿಂದೂ ದೇವರಿಗೆ ಅವಮಾನ ಮಾಡಿದೆ ಎಂದು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ವರದಿಗಳ ಪ್ರಕಾರ ಮಾರ್ಚ್ 4 ಮತ್ತು 5 ರಂದು ನಡೆದ 13 ನೇ ಮಿಸ್ಟರ್ ಜೂನಿಯರ್ ದೇಹದಾರ್ಢ್ಯ ಸ್ಪರ್ಧೆಯನ್ನು ರತ್ಲಾಮ್‌ನ ಮೇಯರ್ (ಬಿಜೆಪಿ) ಪ್ರಹ್ಲಾದ್ ಪಟೇಲ್ ಆಯೋಜಿಸಿದ್ದರು. ಇದರಲ್ಲಿ ರಾಜ್ಯ ಶಿಕ್ಷಣ ಸಚಿವ ಮೋಹನ್ ಯಾದವ್ ಭಾಗವಹಿಸಿದ್ದರು. ಮಹಿಳಾ ದೇಹದಾರ್ಢ್ಯ ಪಟುಗಳು ಹನುಮಂತನ ಚಿತ್ರದ ಮುಂದೆ ಪೋಸ್ ಕೊಟ್ಟಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದಾದ ಬಳಿಕ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ಹರಿಹಾಯ್ದಿವೆ.

ಈ ಘಟನೆಯಿಂದ ಸ್ಥಳೀಯ ಕಾಂಗ್ರೆಸ್ ಮುಖಂಡರು ಕಿಡಿಯಾಗಿದ್ದು, ಕಾರ್ಯಕ್ರಮ ನಡೆದ ಸ್ಥಳವನ್ನು ಗಂಗಾಜಲ ಹಾಕಿ ಶುದ್ಧೀಕರಿಸಿದ್ದಾರೆ. ಹನುಮಾನ್ ಚಾಲೀಸ ಪಠಿಸಿದ್ದಾರೆ. ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖಂಡರು ಇದು ಹನುಮಂತ ದೇವರಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ. 

ಬಳಿಕ ಹೇಳಿಕೆ ನೀಡಿದ ರಾಜ್ಯ ಕಾಂಗ್ರೆಸ್ ಮಾಧ್ಯಮ ಉಸ್ತುವಾರಿ ಕೆಕೆ ಮಿಶ್ರಾ, ಹನುಮಂತನ ಚಿತ್ರದ ಎದುರು ನಗ್ನತೆಯನ್ನು ಪ್ರದರ್ಶಿಸಲಾಗಿದ್ದು, ಬಿಜೆಪಿ ನಾಯಕರ ಸಮ್ಮುಖದಲ್ಲೂ ಪ್ರದರ್ಶನ ಮಾಡಲಾಗಿದೆ. ಬಿಜೆಪಿ ತನ್ನನ್ನು ರಾಮಭಕ್ತ ಪಕ್ಷ ಎಂದು ಕರೆದುಕೊಳ್ಳುತ್ತದೆ. ಆದರೆ ಮತ್ತೊಂದೆಡೆ ಅದರ ನಾಯಕರೇ ಹನುಮಂತನನ್ನು ಅವಮಾನಿಸುತ್ತಿದ್ದಾರೆ. ಹಿಂದೂ ದೇವತೆಯನ್ನು ಅವಮಾನಿಸಿದ್ದಕ್ಕಾಗಿ ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಸಭ್ಯತೆಯ ಆರೋಪದ ಬಗ್ಗೆ ಕಾಂಗ್ರೆಸ್‌ಗೆ ತಿರುಗೇಟು ನೀಡಿದ ಬಿಜೆಪಿ ನಾಯಕ ಹಿತೇಶ್ ಬಾಜ್‌ಪೇಯ್, ಕುಸ್ತಿ, ಜಿಮ್ನಾಸ್ಟಿಕ್ ಅಥವಾ ಈಜು ಸ್ಪರ್ಧೆಗಳಲ್ಲಿ ಮಹಿಳೆಯರು ಭಾಗವಹಿಸುವುದನ್ನು ಕಾಂಗ್ರೆಸ್ಸಿಗರು ನೋಡಲು ಇಷ್ಟಪಡುವುದಿಲ್ಲ. ಏಕೆಂದರೆ ಅವರೊಳಗಿನ ದೆವ್ವ ಇದನ್ನು ನೋಡಿ ಎಚ್ಚರಗೊಳ್ಳುತ್ತದೆ. ಅವರು ಆಟದ ಮೈದಾನದಲ್ಲಿ ಮಾತ್ರವೇ ಮಹಿಳೆಯರನ್ನು ತಮ್ಮ ಕೊಳಕು ಕಣ್ಣುಗಳಿಂದ ನೋಡುತ್ತಾರೆ. ಅವರಿಗೆ ನಾಚಿಕೆ ಆಗಲ್ವಾ ಎಂದು ತಿರುಗೇಟು ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ