ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲಿನ 8 ಬೋಗಿಗಳು!

Twitter
Facebook
LinkedIn
WhatsApp
gstCCIUDHinduKSLU43816B3SR16068314380d1df434b 3a52 4716 a1cf 2b6d261f689c 3

ಜೈಪುರ: ಮುಂಬೈಯಿಂದ ಜೋಧಪುರಕ್ಕೆ ತೆರಳುತ್ತಿದ್ದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲು (Suryanagari Express) ಹಳಿತಪ್ಪಿರುವ (Derail) ಘಟನೆ ರಾಜಸ್ಥಾನದ (Rajasthan) ಪಾಲಿಯಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ 10 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಜೋಧ್‌ಪುರ ವಿಭಾಗದ ರಾಜ್‌ಕಿವಾಸ್-ಬೊಮದ್ರಾ ವಿಭಾಗದ ನಡುವೆ ಇಂದು ಮುಂಜಾನೆ 3:27ರ ವೇಳೆಗೆ ಘಟನೆ ನಡೆದಿದೆ. ಬಾಂದ್ರಾ ಟರ್ಮಿನಲ್‌ನಿಂದ ಜೋಧ್‌ಪುರಕ್ಕೆ ತೆರಳುತ್ತಿದ್ದ ರೈಲಿನ 8 ಬೋಗಿಗಳು ಹಳಿ ತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. 10 ಜನರಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ಪ್ರಯಾಣಿಕರಿಗೆ ಬೇರೆ ರೈಲಿನ ವ್ಯವಸ್ಥೆ ಮಾಡಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳ ತಲುಪಿದ್ದು, ಜನರಲ್ ಮ್ಯಾನೇಜರ್ ನಾರ್ತ್ ವೆಸ್ಟರ್ನ್ ರೈಲ್ವೇ ಮತ್ತು ಇತರ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆಯ ಬಗ್ಗೆ ವಿವರಣೆ ನೀಡಿರುವ ಪ್ರಯಾಣಿಕರೊಬ್ಬರು, ರೈಲು ಮಾರ್ವಾರ್ ಜಂಕ್ಷನ್‌ನಿಂದ ಹೊರಟ 5 ನಿಮಿಷಗಳಲ್ಲಿ ಜೋರಾದ ಶಬ್ದ ಹಾಗೂ ಕಂಪನದ ಅನುಭವವಾಯಿತು. 2-3 ನಿಮಿಷಗಳ ಬಳಿಕ ರೈಲು ನಿಂತಿತು. ನಾವು ಕೆಳಗಿಳಿದ ಸುಮಾರು 8 ಸ್ಲೀಪರ್ ಕ್ಲಾಸ್ ಕೋಚ್‌ಗಳು ಹಳಿತಪ್ಪಿರುವುದು ಕಂಡುಬಂತು. 15-20 ನಿಮಿಷಗಳಲ್ಲಿ ಸ್ಥಳಕ್ಕೆ ಅಂಬುಲೆನ್ಸ್‌ಗಳು ಬಂದವು ಎಂದು ತಿಳಿಸಿದ್ದಾರೆ.

ಈ ನಡುವೆ ರಾಜಸ್ಥಾನದಲ್ಲಿ ರೈಲು ಹಳಿ ತಪ್ಪಿದ್ದರಿಂದ ಹಲವಾರು ರೈಲು ಸಂಚಾರಕ್ಕೂ ತೊಂದರೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ