ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹವಾಮಾನ ಬದ್ಧತೆಗಳಿಗೆ ಭಾರತದ ಸಮರ್ಪಣೆ ಅದರ ಕಾರ್ಯಕ್ಷಮತೆಯಿಂದ ಸ್ಪಷ್ಟ: ಪ್ರಧಾನಿ ಮೋದಿ

Twitter
Facebook
LinkedIn
WhatsApp
ಹವಾಮಾನ ಬದ್ಧತೆಗಳಿಗೆ ಭಾರತದ ಸಮರ್ಪಣೆ ಅದರ ಕಾರ್ಯಕ್ಷಮತೆಯಿಂದ ಸ್ಪಷ್ಟ: ಪ್ರಧಾನಿ ಮೋದಿ

ಜರ್ಮನಿ: ಹವಾಮಾನ ಬದ್ಧತೆಗಳಿಗೆ ಭಾರತದ ಸಮರ್ಪಣೆ ಅದರ ಕಾರ್ಯಕ್ಷಮತೆಯಿಂದ ಸ್ಪಷ್ಟವಾಗಿದೆ ಎಂದು ಸೋಮವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ವೈಫರಿತ್ಯ ಎದುರಿಸುವಲ್ಲಿ ಭಾರತದ ಪ್ರಯತ್ನಗಳನ್ನು ಜಿ-7 ಶ್ರೀಮಂತ ರಾಷ್ಟ್ರಗಳು ಬೆಂಬಲಿಸುತ್ತವೆ ಎಂಬ ಭರವಸೆ ವ್ಯಕ್ತಪಡಿಸಿದರು. ಅಲ್ಲದೇ, ದೇಶದಲ್ಲಿ ಹೊರಹೊಮ್ಮುತ್ತಿರುವ ಶುದ್ಧ ಇಂಧನ ತಂತ್ರಜ್ಞಾನಗಳಿಗೆ ಬೃಹತ್ ಮಾರುಕಟ್ಟೆ ಪಡೆಯಲು ಅವರನ್ನು ಆಹ್ವಾನಿಸಿದರು.

ಜಿ-7 ಶೃಂಗಸಭೆಯಲ್ಲಿ ‘ಉತ್ತಮ ಭವಿಷ್ಯದಲ್ಲಿ ಹೂಡಿಕೆ,  ಹವಾಮಾನ, ಶಕ್ತಿ, ಆರೋಗ್ಯ’ ಕುರಿತ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ದಾಖಲೆಯನ್ನು ಎತ್ತಿ ತೋರಿಸಿದರು ಮತ್ತು  ಪಳೆಯುಳಿಕೆ ರಹಿತ ಮೂಲಗಳಿಂದ ಶೇಕಡಾ 40 ರಷ್ಟು ಇಂಧನ ಸಾಮರ್ಥ್ಯದ ಗುರಿಯನ್ನು ಸಾಧಿಸಿದೆ ಎಂದು ಹೇಳಿದರು.

ಪೆಟ್ರೋಲ್‌ನಲ್ಲಿ ಶೇಕಡಾ 10 ರಷ್ಟು ಎಥೆನಾಲ್ ಮಿಶ್ರಣ ಮಾಡುವ ಗುರಿಯನ್ನು 5 ತಿಂಗಳ ಮೊದಲೇ ಸಾಧಿಸಲಾಗಿದೆ. ಭಾರತವು ವಿಶ್ವದ ಮೊದಲ ಸಂಪೂರ್ಣ ಸೌರಶಕ್ತಿ ಚಾಲಿತ ವಿಮಾನ ನಿಲ್ದಾಣವನ್ನು ಹೊಂದಿದೆ. ಈ ದಶಕದಲ್ಲಿ ಭಾರತದ ಬೃಹತ್ ರೈಲ್ವೆ ವ್ಯವಸ್ಥೆಯಲ್ಲಿ ವಾಯುಮಾಲಿನ್ಯವನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದರು.

ಭಾರತದಂತಹ ದೊಡ್ಡ ದೇಶವು ಅಂತಹ ಮಹತ್ವಾಕಾಂಕ್ಷೆಯನ್ನು ಪ್ರದರ್ಶಿಸಿದಾಗ, ಇತರ ಅಭಿವೃದ್ಧಿಶೀಲ ರಾಷ್ಟ್ರಗಳು ಸಹ ಸ್ಫೂರ್ತಿ ಪಡೆಯುತ್ತವೆ. ಜಿ-7 ಶ್ರೀಮಂತ ರಾಷ್ಟ್ರಗಳು ಭಾರತದ ಪ್ರಯತ್ನಗಳನ್ನು ಬೆಂಬಲಿಸುತ್ತವೆ ಎಂದು ನಾವು ಭಾವಿಸುತ್ತೇವೆ. ಇಂದು ಭಾರತದಲ್ಲಿ ಶುದ್ಧ ಇಂಧನ ತಂತ್ರಜ್ಞಾನಗಳಿಗೆ ದೊಡ್ಡ ಮಾರುಕಟ್ಟೆ ಹೊರಹೊಮ್ಮುತ್ತಿವೆ ಎಂದು ಅವರು ತಿಳಿಸಿದರು.ಜಿ-7 ರಾಷ್ಟ್ರಗಳು ಈ ಕ್ಷೇತ್ರದಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಉತ್ಪಾದನೆಯಲ್ಲಿ ಹೂಡಿಕೆ ಮಾಡಬಹುದು ಎಂದು ಅವರು ಹೇಳಿದರು.

ಹವಾಮಾನ, ಇಂಧನ ಮತ್ತು ಆರೋಗ್ಯ ಕುರಿತ ಜಿ-7 ಅಧಿವೇಶನದಲ್ಲಿ ಶುದ್ಧ ಇಂಧನ, ಸುಸ್ಥಿರ ಜೀವನ ಶೈಲಿ ಮತ್ತು ಜಾಗತಿಕ ಯೋಗಕ್ಷೇಮಕ್ಕಾಗಿ ಭಾರತದ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಎತ್ತಿ ತೋರಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಜಿ-7 ಶೃಂಗಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರೂಡೊ ಅವರೊಂದಿಗೆ ಹಸ್ತಲಾಘವ ಮಾಡಿದರು. ಮೇ ತಿಂಗಳಲ್ಲಿ ನಡೆದ ಜಪಾನ್ ಕ್ವಾಡ್ ಶೃಂಗಸಭೆ ನಂತರ ಇದೇ ಮೊದಲ ಬಾರಿಗೆ ಮೋದಿ ಮತ್ತು ಬೈಡನ್ ಭೇಟಿಯಾದರು.  ಜರ್ಮನಿಯ ಚಾನ್ಸೆಲರ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ದಕ್ಷಿಣ ಜರ್ಮನಿಯ ಸ್ಕ್ಲೋಸ್ ಎಲ್ಮೌವಿನ ಆಲ್ಪೈನ್ ಕ್ಯಾಸಲ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ