ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಪು: ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ

Twitter
Facebook
LinkedIn
WhatsApp
ಬೆಂಗಳೂರು-ಮಂಗಳೂರು ನಡುವೆ ಆ. 30ರ ತನಕ ವಿಶೇಷ ರೈಲು ಸೇವೆ ಆರಂಭ

ಕಾಪು ,ಜುಲೈ 24 : ಸಾಮಾಜಿಕ ಜಾಲತಾಣದ ಮೂಲಕ ಕರ್ನಾಟಕ ರಾಜ್ಯದಲ್ಲಿರುವ ಅನೇಕ ಜನರನ್ನು ಒಂದುಗೂಡಿಸಿ , ಅವರೆಲ್ಲರ ಸಹಕಾರದಿಂದ ಪ್ರಾರಂಭಗೊಂಡ ಅನಂತ ಇನ್ನಂಜೆ ಯವರ ನೇತೃತ್ವದ ಉಡುಪಿಯ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ರವಿವಾರ ಉಡುಪಿ ಹಾಗೂ ಕಾಪು ತಾಲ್ಲೂಕಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಇವರು ಮಾತನಾಡಿ , ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ಮೂಲಕ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಹಲವು ಕಡೆಗಳಲ್ಲಿ ನಿರಂತರ ಸಮಾಜ ಸೇವಾ ಚಟುವಟಿಕೆಗಳು ನಡೆಯುತ್ತಿವೆ‌.

ಉಡುಪಿ ಜಿಲ್ಲೆಯ ವಿವಿಧ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಪ್ರಯತ್ನಕ್ಕೂ ಚಾಲನೆ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದರು.

ಟ್ರಸ್ಟ್ ನ ಅಧ್ಯಕ್ಷರಾದ ಅನಂತ ಇನ್ನಂಜೆ ಇವರು ಮಾತನಾಡಿ , ಸಮಾಜದಿಂದ ಕಷ್ಟಕಾಲದಲ್ಲಿ ಪಡೆದಿರುವ ಉತ್ತಮ ಸ್ಪಂದನೆಯನ್ನು ಸಮಾಜಕ್ಕೆ ಸಕಾಲದಲ್ಲಿ ಹಿಂದೆ ನೀಡಬೇಕು ಎನ್ನುವ ಮಾತಿನಂತೆ ಸಮಾಜದಲ್ಲಿ ಅಗತ್ಯವುಳ್ಳವರ ನೋವಿಗೆ ಸ್ಪಂದಿಸುವ ಉದ್ದೇಶದಿಂದ ಈ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ಕಾರ್ಯಾಚರಿಸುತ್ತಿದೆ.ಶಿಕ್ಷಣ ಆಹಾರ ಆರೋಗ್ಯ ಈ ಮೂರು ವಿಷಯದಲ್ಲಿ ಈ ಟ್ರಸ್ಟ್ ಕಾರ್ಯಾಚರಿಸುತ್ತಿದ್ದು ಸಾಮಾಜಿಕ ಜಾಲತಾಣದ ಸದ್ವಿನಿಯೋಗದಿಂದ ಹಲವಾರು ಜನರ ಸಹಕಾರದಿಂದ ಇಂತಹ ಮಹತ್ಕಾರ್ಯವು ಸಾಧ್ಯವಾಯಿತು ಎಂದರು.

ಸಮಾಜ ಸೇವಕರು ಹಾಗೂ ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಯಶ್ ಪಾಲ್ ಎ ಸುವರ್ಣ ಇವರು ತಮ್ಮ ಮಹಾಲಕ್ಷ್ಮಿ ಕೋಪರೇಟಿವ್ ಬ್ಯಾಂಕಿನಿಂದ ಪುರಸ್ಕೃತ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಂಕ್ ಎಕೌಂಟ್ ಹಾಗೂ ಎ.ಟಿ.ಎಮ್ ಕಾರ್ಡ್ ನ ಸೌಲಭ್ಯಗಳನ್ನು ಒದಗಿಸಿದರು.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಐಕಳಬಾವ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು , ಜೆ.ಡಿ.ಎಸ್ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ , ಶ್ರೀರಾಮ ಸೇನೆಯ ವಲಯಾಧ್ಯಕ್ಷರಾದ ಮೋಹನ್ ಭಟ್ ಮಣಿಪಾಲ ,ಸಮಾಜ ಸೇವಕರಾದ ಲೀಲಾಧರ ಶೆಟ್ಟಿ ಕಾಪು , ಇನ್ನಂಜೆ ಇವರು ಶುಭಾಶಂಸನೆಗೈದರು.

ಎಸ್.ವಿ.ಹೆಚ್ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಪುಂಡರೀಕಾಕ್ಷ ಕೊಡಂಚ ಇವರು ಮಕ್ಕಳಿಗೆ ದ್ವಿತೀಯ ಪಿ.ಯು.ಸಿ ನಂತರ ಮತ್ತೇನು ಎನ್ನುವ ವಿಷಯದ ಬಗ್ಗೆ ಮಾರ್ಗದರ್ಶನವನ್ನು ನೀಡಿದರು.

ಅನಿಲ್ ಆಚಾರ್ಯ ಓಂತಿಬೆಟ್ಟು ಇವರು ಸ್ವಾಗತಿಸಿ , ಎಮ್ ಶ್ರೀನಿವಾಸ್ ಭಟ್ ಉಡುಪಿ ಇವರು ಕಾರ್ಯಕ್ರಮ ನಿರ್ವಹಿಸಿದರು. ಅಮೃತಾ ಭಟ್ ಇವರು ವಂದಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ