ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಕಿ ವಿಶ್ವಕಪ್: ಬಲಿಷ್ಠ ಸ್ಪೇನ್ ವಿರುದ್ಧ 2-0 ಗೆಲುವು,

Twitter
Facebook
LinkedIn
WhatsApp
pti01 13 2023 000310b 710x400xt

ಒಡಿಶಾದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್‌ನಲ್ಲಿ ಭಾರತವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭಾರತ 2-0 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿದೆ. 

ಭಾರತದ ಪರ ಅಮಿತ್ ರೋಹಿದಾಸ್ ಮತ್ತು ಹಾರ್ದಿಕ್ ಸಿಂಗ್ ಗೋಲು ಗಳಿಸಿದರು. ಭಾರತ ಎರಡನೇ ಪಂದ್ಯವನ್ನು ಜನವರಿ 15ರಂದು ಬಲಿಷ್ಠ ಇಂಗ್ಲೆಂಡ್ ವಿರುದ್ಧ ಆಡಲಿದೆ. ಇಂಗ್ಲೆಂಡ್ ತನ್ನ ಮೊದಲ ಪಂದ್ಯದಲ್ಲಿ ವೇಲ್ಸ್ ಅನ್ನು 5-0 ಗೋಲುಗಳಿಂದ ಸೋಲಿಸಿತ್ತು. ಸ್ಪೇನ್ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಪೂಲ್ ಡಿನಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಗ್ಲೆಂಡ್ ಈ ಹಿಂದೆ ವೇಲ್ಸ್ ತಂಡವನ್ನು  5-0 ಅಂತರದಿಂದ ಸೋಲಿಸಿ ಮೊದಲ ಸ್ಥಾನದಲ್ಲಿದ್ದಾರೆ.

ಭಾರತ ನಿಧಾನವಾಗಿ ಪಂದ್ಯ ಆರಂಭಿಸಿತು. ಮೊದಲ ಐದು ನಿಮಿಷಗಳ ಕಾಲ ಸ್ಪೇನ್ ಟೀಂ ಇಂಡಿಯಾವನ್ನು ಸಾಕಷ್ಟು ಕಂಗೆಡಿಸಿತು. ಆದರೆ ಪಂದ್ಯ ಮುಂದುವರೆದಂತೆ, ಭಾರತವು ಪಂದ್ಯದಲ್ಲಿ ಮೇಲುಗೈ ಸಾಧಿಸಲು ಪ್ರಾರಂಭಿಸಿತು. 11ನೇ ನಿಮಿಷದಲ್ಲಿ ಟೀಂ ಇಂಡಿಯಾ ತನ್ನ ಲಾಭ ಪಡೆಯಿತು.

ಭಾರತಕ್ಕೆ ಮೊದಲ ಪೆನಾಲ್ಟಿ ಕಾರ್ನರ್ ಸಿಕ್ಕಿತು. ಆದರೆ ಅದನ್ನು ಗೋಲ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಮುಂದಿನ ನಿಮಿಷದಲ್ಲಿ ಎರಡನೇ ಪೆನಾಲ್ಟಿ ಕಾರ್ನರ್ ಸಿಕ್ಕಿದ್ದು ಅದನ್ನು ಅಮಿತ್ ರೋಹಿದಾಸ್ ಅದ್ಭುತ ಗೋಲು ಬಾರಿಸಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದರು.

26ನೇ ನಿಮಿಷದಲ್ಲಿ ಭಾರತ ಎರಡನೇ ಗೋಲು ದಾಖಲಿಸಿತು. ಹಾರ್ದಿಕ್ ಸಿಂಗ್ ಅಮೋಘ ಗೋಲು ದಾಖಲಿಸಿದರು. ಇದು ಈ ವಿಶ್ವಕಪ್‌ನಲ್ಲಿ ಭಾರತದ ಮೊದಲ ಫೀಲ್ಡ್ ಗೋಲ್ ಆಗಿದೆ. ಇದಾದ ಬಳಿಕ ಭಾರತ ಯಾವುದೇ ಗೋಲು ಗಳಿಸಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ