ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!

Twitter
Facebook
LinkedIn
WhatsApp
ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!

ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ನ್ಯೂಪಡ್ಪು ಹಾಜಬ್ಬರ ಶಾಲೆಯಲ್ಲಿ 3ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಶಾಜಿಯಾ ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್ಎಸ್ ಶಿಬಿರದಲ್ಲಿ ಭಾಗಿಯಾಗಿದ್ದಳು. ಇಂದು ಗೇಟಿನ ಬಳಿ ಆಟವಾಡುತ್ತಿರುವಾಗ, ಮಳೆಗೆ ನೆನೆದಿದ್ದ ಶಾಲೆಯ ತಡೆಗೋಡೆ ಏಕಾಏಕಿ ಕುಸಿದಿದ್ದು, ಬಾಲಕಿ ತಡೆಗೋಡೆಯ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾಳೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಕಟ್ಟಿದ ನ್ಯೂಪಡ್ಪು ಶಾಲೆಯಲ್ಲಿ ಈ ದುರಂತ ನಡೆದಿದೆ.

ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು

ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಸಂಭವಿಸಿದೆ. ಮುಡ್ಡಾಯಿಗುಡ್ಡೆ ನಿವಾಸಿ ಹರೀಶ್ ಪೂಜಾರಿ (48) ಮತ್ತು ಅವರ ಅಕ್ಕನ ಮಗ ಕಾರ್ಕಳದ ಕಾಲೇಜು ವಿದ್ಯಾರ್ಥಿ ಹೃತೇಶ್ ಪೂಜಾರಿ (18) ಉಬ್ಬರಬೈಲು ಗುಂಡಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಂದರ್ಭ ನೀರಿನ ಸುಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿದೆ. ಇರ್ಷಾದ್ ( 56 ಮೃತ ದುರ್ದೈವಿ. ಶನಿವಾರ ತಡರಾತ್ರಿ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಜೊತೆಗೆ ಭರ್ಜರಿ ಮಳೆಯಾಗಿದ್ದು, ಗಾಳಿಗೆ ವಿದ್ಯುತ್‌ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ.ಭಾನುವಾರ ಬೆಳಗ್ಗೆ ಇರ್ಷಾದ್ ಮನೆಯಿಂದ ರಸ್ತೆಗೆ ಬಂದ ಸಂದರ್ಭದಲ್ಲಿ ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದೇ ತುಳಿದಿದ್ದಾರೆ. ಈ ವೇಳೆ ಏಕಾಏಕಿ ವಿದ್ಯುತ್‌ ಪ್ರವಹಿಸಿದ್ದು, ಇರ್ಷಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ