ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ
Twitter
Facebook
LinkedIn
WhatsApp
ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ದೆಹಲಿಯ ದ್ವಾರಕಾ-1 ಪ್ರದೇಶದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಕೀಲರೊಬ್ಬರನ್ನು ಗುಂಡಿಕ್ಕಿ ಕೊಂದ ಘಟನೆ ಶನಿವಾರ ನಡೆಸಿದೆ. ಗುಂಡಿಗೆ ಬಲಿಯಾದ ವ್ಯಕ್ತಿಯನ್ನು ದ್ವಾರಕಾದ ಸೆಕ್ಟರ್ 12 ನಿವಾಸಿ, ವಕೀಲ ವೀರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ವೈಯಕ್ತಿಕ ದ್ವೇಷವೇ ಅಪರಾಧಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಶಂಕಿಸಿದ್ದಾರೆ.