ಸೋಮವಾರ, ಏಪ್ರಿಲ್ 29, 2024
Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆ ಕೊಲೆ ಮಾಡಿ ಕಳ್ಳತನ ಪ್ರಕರಣ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ..!

Twitter
Facebook
LinkedIn
WhatsApp
ಬೆಳ್ತಂಗಡಿಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆ ಕೊಲೆ ಮಾಡಿ ಕಳ್ಳತನ ಪ್ರಕರಣ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ..!
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ಹಾಡಹಗಲೇ ಮನೆಯಲ್ಲಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದು ಪರಾರಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂದು ಗುರುತಿಸಲಾಗಿದೆ. ಅಶೋಕ ಬಂಧಿತ ಆರೋಪಿ. ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲ್ಲೆ ನಡೆಸಿ ಕೊಲೆ ಮಾಡಿ ಆಭರಣ ದೋಚಿ ಪರಾರಿಯಾದ ಆರೋಪಿ ಅಜ್ಜಿಯ ಮೊಮ್ಮಗನೇ ಎನ್ನುವುದು ವಿಚಾರಣೆ ವೇಳೆ ತಿಳಿದುಬಂದಿದೆ.

ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ನಂತರ ಹೊರಗಡೆ ಬಂದು ನೋಡಿದಾಗ ಅಜ್ಜಿ ತಮ್ಮ ಮನೆಯ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು ಕಂಡು ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ಯಾರೋ ದರೋಡೆಗೈದಿರುವುದು ಬೆಳಕಿಗೆ ಬಂದಿದೆ.

ಇನ್ನು, ಈ ಬಗ್ಗೆ ಧರ್ಮಸ್ಥಳ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಶೋಕ ಆಗಾಗ ಅಜ್ಜಿಯ ಮನೆಗೆ ಬಂದು ಹೋಗುತ್ತಿದ್ದು ಆತ ಐಸ್ ಕ್ರೀಮ್ ಲೈನ್ ಸೇಲ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಜುಲೈ 23ರಂದು ಮಧ್ಯಾಹ್ನ ಅಜ್ಜಿಯ ಮನೆಯಲ್ಲಿ ಯಾರು ಇಲ್ಲದ ವಿಷಯ ಅರಿತು ಬಂದವ ನೇರವಾಗಿ ಅಜ್ಜಿಯ ಕಿವಿಯ ಆಭರಣವನ್ನು ಕಿತ್ತಿದ್ದಾನೆ. ನಂತರ ಅಜ್ಜಿಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಹಣ ಮತ್ತು ಒಡವೆಗಳನ್ನು ದೋಚಿ ಪರಾರಿಯಾಗಿದ್ದಾನೆ. ತೀವ್ರ ಗಾಯಗಳಾಗಿದ್ದ ಅಜ್ಜಿ ಮೃತಪಟ್ಟಿದ್ದು ಆರೋಪಿಯನ್ನು ಪೊಲೀಸರು ಬೆಳ್ತಂಗಡಿಯ ಸೋಮಂದಡ್ಕದಲ್ಲಿ ಬಂಧಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ