ಕಲಬುರಗಿ: ಹಾಡಹಗಲೇ ಯುವಕನೋರ್ವ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಕೆಬಿಎನ್ ಆಸ್ಪತ್ರೆ ಎದುರು ನಡೆದಿದೆ.
ನಗರದ ಫಿಲ್ಟರ್ ಬೆಡ್ ನಿವಾಸಿ ವಿಜಯ್ ಎಂಬಾತನಿಗೆ ಚಾಕು ಇರಿಯಲಾಗಿದೆ.
ಚಾಕು ಇರಿತದಿಂದ ತೀವ್ರ ಗಾಯಗೊಂಡ ಯುವಕ ವಿಜಯ್ ತೀವ್ರ ರಕ್ತಸ್ರಾವದಿಂದ ಬೈಕ್ ಮೇಲೆ ಕುಳಿತು ಒದ್ದಾಡುತ್ತಿದ್ದರೂ ಕೂಡ ಸ್ಥಳೀಯರು ಅಸಹಾಯಕರಂತೆ ನಿಂತು ಮೊಬೈಲ್ನಲ್ಲಿ ದೃಶ್ಯ ಸೆರೆ ಹಿಡಿಯುತ್ತಿದ್ದರು. ಬಳಿಕ ಸ್ಥಳಕ್ಕಾಗಮಿಸಿದ ಟ್ರಾಫಿಕ್ ಪೊಲೀಸರು ಯುವಕನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.ಕಲಬುರಗಿಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳ ದಾಳಿ ನಡೆಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆಯಷ್ಟೇ ದುಷ್ಕರ್ಮಿಗಳು ವಿಜಯ್ನ ಒಂದು ಕಾಲು ಕಟ್ ಮಾಡಿ ಕ್ರೌರ್ಯ ಮೆರೆದಿದ್ದರು ಎನ್ನಲಾಗ್ತಿದೆ. ಇದೀಗ ಅದೇ ದುಷ್ಕರ್ಮಿಗಳು ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist