ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದಿ ಚಿತ್ರರಂಗದಲ್ಲಿ ನೈತಿಕತೆ ಮತ್ತು ಮೌಲ್ಯಗಳ ಕೊರತೆಯಿದೆ: ಕಾಜಲ್ ಅಗರ್ವಾಲ್ ಬೋಲ್ಡ್ ಹೇಳಿಕೆ

Twitter
Facebook
LinkedIn
WhatsApp
kajalaggarwal

ನಟಿ ಕಾಜಲ್ ಅಗರ್​ವಾಲ್ ಅವರು ಸದಾ ವಿವಾದದಿಂದ ದೂರ ಉಳಿಯೋಕೆ ಪ್ರಯತ್ನಿಸುತ್ತಾರೆ. ಟ್ರೋಲ್​ಗಳ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಕಾಜಲ್ ಅಗರ್​ವಾಲ್ ಅವರು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆಹುಟ್ಟು ಹಾಕಿದೆ. ಬಾಲಿವುಡ್ ಚಿತ್ರರಂಗದಲ್ಲಿ ಕಾಜಲ್ ಗುರುತಿಸಿಕೊಂಡಿದ್ದಾರೆ. ಹೀಗಿದ್ದರೂ ಅಲ್ಲಿನವರಿಗೆ ಎಥಿಕ್ಸ್​ನ ಕೊರತೆ ಇದೆ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಇದಕ್ಕೆ ಬಾಲಿವುಡ್​ನ ಕೆಲವರು ಅಪಸ್ವರ ತೆಗೆದಿದ್ದಾರೆ. ಈ ಹೇಳಿಕೆಯಿಂದ ಕಾಜಲ್ ಅಗರ್​ವಾಲ್​ಗೆ ಹಿಂದಿಯಿಂದ ಬರುವ ಆಫರ್​ಗಳು ಕೈತಪ್ಪಿದರೂ ಅಚ್ಚರಿ ಏನಿಲ್ಲ.

ಹಿಂದಿ ಚಿತ್ರರಂಗದಲ್ಲಿ ನೈತಿಕತೆ ಮತ್ತು ಮೌಲ್ಯಗಳ ಕೊರತೆಯಿದೆ: ಕಾಜಲ್ ಅಗರ್ವಾಲ್ ಬೋಲ್ಡ್ ಹೇಳಿಕೆ

ಕಾಜಲ್ ಅಗರ್​ವಾಲ್ ಅವರು ಮೊದಲ ಬಾರಿಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದು ಹಿಂದಿ ಚಿತ್ರರಂಗದ ಮೂಲಕ. ‘ಕ್ಯೂ ಹೋ ಗಯಾ ನಾ’ ಅವರ ಮೊದಲ ಚಿತ್ರ. ಈ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರ ಸಹೋದರಿಯ ಪಾತ್ರವನ್ನು ಮಾಡಿದ್ದರು ಕಾಜಲ್. ಈ ಚಿತ್ರದಲ್ಲಿ ಅವರದ್ದು ಅತಿಥಿ ಪಾತ್ರ ಆಗಿತ್ತು. ಬಳಿಕ ‘ಸಿಂಗಮ್​’ ಮೊದಲಾದ ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಸದ್ಯ ‘ಉಮಾ’ ಹೆಸರಿನ ಹಿಂದಿ ಚಿತ್ರ ಅವರ ಕೈಯಲ್ಲಿದೆ. ಆದಾಗ್ಯೂ ಅವರು ಬೋಲ್ಡ್ ಹೇಳಿಕೆ ನೀಡಿದ್ದಾರೆ. ತಮಗೆ ಅನಿಸಿದ್ದನ್ನು ನೇರವಾಗಿ ಹೇಳಿದ್ದಾರೆ.

ನ್ಯೂಸ್​18 ಇಂಗ್ಲಿಷ್ ನಡೆಸಿದ ‘ರೈಸಿಂಗ್ ಇಂಡಿಯಾ ರಿಯಲ್ ಹೀರೋಸ್’ ವೇದಿಕೆ ಮೇಲೆ ಕಾಜಲ್ ಮಾತನಾಡಿದ್ದಾರೆ. ‘ದಕ್ಷಿಣ ಸಿನಿಮಾ ಇಂಡಸ್ಟ್ರಿಯ ನೈತಿಕತೆ, ಶಿಸ್ತು ನನಗೆ ಇಷ್ಟವಾಗುತ್ತದೆ. ಹಿಂದಿ ಚಿತ್ರರಂಗದಲ್ಲಿ ಅದರ ಕೊರತೆಯಿದೆ ಎಂದು ನನಗೆ ಅನಿಸುತ್ತದೆ’ ಎಂದಿದ್ದಾರೆ ಕಾಜಲ್ ಅಗರ್​ವಾಲ್. ಬಾಲಿವುಡ್​-ದಕ್ಷಿಣ ಭಾರತ ಎಂಬ ಚರ್ಚೆ ಜೋರಾಗಿರುವಾಗಲೇ ಕಾಜಲ್ ನೀಡಿದ ಈ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಹಿಂದಿ ಚಿತ್ರರಂಗದಲ್ಲಿ ನೈತಿಕತೆ ಮತ್ತು ಮೌಲ್ಯಗಳ ಕೊರತೆಯಿದೆ: ಕಾಜಲ್ ಅಗರ್ವಾಲ್ ಬೋಲ್ಡ್ ಹೇಳಿಕೆ

‘ಕಾಜಲ್ ಅಗರ್​ವಾಲ್​ ನಿಜವಾದ ಕ್ವೀನ್. ಇದನ್ನು ವೇದಿಕೆ ಮೇಲೆ ಹೇಳೋಕೆ ಧೈರ್ಯ ಬೇಕು’ ಎಂದು ಅನೇಕರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಕಾಜಲ್ ಅಗರ್​ವಾಲ್ ಅವರ ವಿರುದ್ಧ ಕ್ಯಾತೆ ತೆಗೆದಿದ್ದಾರೆ. ‘ಬಾಲಿವುಡ್​ನಲ್ಲಿ ನಟಿಸಿ ಈ ರೀತಿ ಹೇಳೋದು ಸರಿ ಅಲ್ಲ’ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಜಲ್ ಅಗರ್​ವಾಲ್​ ಅವರು ಸದ್ಯ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಕಮಲ್ ಹಾಸನ್ ಹೀರೋ. ಈ ಚಿತ್ರದ ಶೂಟಿಂಗ್ ವಿದೇಶದಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ