ಬಹು ಚರ್ಚೆಗೆ ಅವಕಾಶ ಆಗಿದ್ದ ಹಿಜಾಬ್ ವಿವಾದ ಕೊನೆಗೂ ಹೈಕೋರ್ಟ್ ಅಂಗಳದಲ್ಲಿ ಮುಕ್ತಾಯವಾಗಿದ್ದು, ಶಾಲೆಗೆ ಹಿಜಾಬ್ ಧರಿಸಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ ಶಾಲಾ ಸಮವಸ್ತ್ರ ವೆ ಅಂತಿಮ ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್ ಈ ವಿಷಯದಲ್ಲಿ ತನ್ನ ಅಂತಿಮ ತೀರ್ಪು ನೀಡಿದೆ.
ಕರ್ನಾಟಕ ಹೈಕೋರ್ಟ್ನ ಪೂರ್ಣ ಪೀಠ ಮಹತ್ವದ ತೀರ್ಪು ನೀಡಿದೆ. ಪ್ರತಿ ಪುಟಕ್ಕೂ ಸಹಿ ಹಾಕಿ ಹೇಳಿಕೆ ನೀಡಿದ ಮುಖ್ಯ ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ಕೆಲವು ಪ್ರಶ್ನೆಗಳನ್ನು ರಚಿಸಿದ್ದೇವೆ. ಅವುಗಳಿಗೆ ಉತ್ತರವನ್ನೂ ನೀಡಿದ್ದೇವೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದರು. ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು, ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್ ತಿಳಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist