ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿರಿಯ ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ

Twitter
Facebook
LinkedIn
WhatsApp
ಹಿರಿಯ ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ

ಬೆಂಗಳೂರು: ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್(Actress Vinaya Prasad) ಮನೆಯೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿಸಿದ್ದಾರೆ. ವಿನಯಪ್ರಸಾದ್​ ಅವರ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ ಬೀಗ ಒಡೆದು ನುಗ್ಗಿರುವ ಕಳ್ಳರು ಲಾಕರ್​ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ದೀಪಾವಳಿ ಹಬ್ಬಕ್ಕೆಂದು ಉಡುಪಿಗೆ ತೆರಳಿದ್ದ ನಟಿ ಮೊನ್ನೆ 26ರಂದು ಮನೆಗೆ ಹಿಂದಿರುಗಿದ್ದರು. ಈ ವೇಳೆ ಮನೆಯಲ್ಲಿ ಕಳ್ಳತನವಾಗಿರುವುದನ್ನು ಪತ್ತೆಯಾಗಿದೆ. ಕೂಡಲೇ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

 26ರ ಸಂಜೆ 4.30ಕ್ಕೆ ನಟಿ ಮನೆಗೆ ಹಿಂದಿರುಗಿದ್ದರು. ಮನೆಯ ಬಾಗಿಲಿನ ಬೀಗ ಒಡೆದು ಕಳ್ಳರು ಮನೆಯೊಳಗೆ ನುಗ್ಗಿ ಮನೆಯ ರೂಂನ ಲಾಕರ್​ನಲ್ಲಿಟ್ಟಿದ್ದ ನಗದನ್ನು ದೋಚಿದ್ದಾರೆ. ಏರಿಯಾದ ಹಳೇ ಕಳ್ಳರ ಗ್ಯಾಂಗ್, ಸುಲಿಗೆಕೋರರು ಹಾಗೂ ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನಂದಿನಿ ಲೇ ಔಟ್ ನ 4ನೇ ಹಂತದ ರೈಲ್ವೆ ಮೆನ್ಸ್ ಕಾಲೊನಿಯಲ್ಲಿ ವಿನಯ ಪ್ರಸಾದ್ ತಮ್ಮ ಪತಿ ಪ್ರಕಾಶ್ ಜೊತೆ ವಾಸವಾಗಿದ್ದಾರೆ. ಅಪರಿಚಿತ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ