ಶಿವಮೊಗ್ಗ: ಅಡುಗೆ ಮಾಡುವಾಗ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಹೊಸನಗರದ ಮೇಲಿಗೆಬೆಸಿಗೆ ಗ್ರಾಮದಲ್ಲಿ ನಡೆದಿದೆ. ಸೌಮ್ಯ (24) ಸಾವನ್ನಪ್ಪಿದ ಮಹಿಳೆ. ಅಡುಗೆ ಮನೆಗೆ ಹೋದಾಗ ಕಾಲಿಗೆ ವಿಷಕಾರಿ ಹಾವು ಕಚ್ಚಿತ್ತು.
ಸ್ವಲ್ಪ ಸಮಯದ ಬಳಿಕ ಕಾಲಿನಲ್ಲಿ ಊತ ಕಾಣಿಸಿಕೊಂಡು ತೀವ್ರ ನೋವು ಉಂಟಾಗಿದೆ. ಹಾವು ಕಚ್ಚಿರುವ ಬಗ್ಗೆ ಅನುಮಾನಗೊಂಡು ಹೊಸನಗರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದರು.
ಸೌಮ್ಯ ನಾಲ್ಕು ವರ್ಷದ ಹಿಂದೆ ನಾಗರಾಜ್ ಎಂಬುವರ ಜೊತೆ ಪ್ರೇಮ ವಿವಾಹವಾಗಿದ್ದರು. ಮೃತರಿಗೆ ಮೂರು ವರ್ಷದ ಗಂಡು ಮಗನಿದ್ದಾನೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist