ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಸಮಪಾಲು

Twitter
Facebook
LinkedIn
WhatsApp
file7g6dsujph801jsoyd61y16234283611648648844

 ಶಿರಾ :  ಹೆಣ್ಣಿನ ಪ್ರಮಾಣ ಕಡಿಮೆ ಇರುವ ಕಾರಣ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ತಾಯಿ-ಮಡದಿಯಾಗಿ ಹೆಣ್ಣನ್ನು ಗೌರವಿಸುವಂತಹ ಸಮಾಜ ಮಗಳನ್ನು ಕೂಡ ಅಷ್ಟೇ ಗೌರವದಿಂದ ಕಾಣುವಂತಹ ಸಂಸ್ಕಾರವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಸಮಪಾಲು ಇದೆ ಎಂದು ಅಧಿಕ ಸಿವಿಲ್‌ ನ್ಯಾಯಾಧೀಶರಾದ ಎಂ.ವಿ. ಲಕ್ಷ್ಮಿ ಹೇಳಿದರು.

ತಾಲೂಕಿನ ತಾವರೆಕೆರೆ ಗ್ರಾಮದ ಶ್ರೀ ಗಣೇಶ ದೇವಸ್ಥಾನ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾವರೆಕೆರೆ ಗ್ರಾಮ ಪಂಚಾಯತಿ, ವಕೀಲರ ಸಂಘ ಶಿರಾ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಕಾನೂನು ಅರಿವು ಮತ್ತು ನೆರವು, ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಸಕ್ತ ಸಂದರ್ಭದಲ್ಲಿ ಮಕ್ಕಳು ತಂದೆ ತಾಯಿಯನ್ನು ಸಾಕಿ ಪೋಷಣೆ ಮಾಡಲು ಸಾಧ್ಯವಿಲ್ಲ ಎಂದು ಬೀದಿಗೆ ತಳ್ಳಿದ ಪ್ರಕರಣಗಳಿವೆ, ತವರು ಮನೆಯಲ್ಲಿ ಇದ್ದರು ತಂದೆಯ ತಾಯಿಯ ಮೇಲೆ ಹೆಚ್ಚು ಮಮತೆ ತೋರಿಸುವ ಕರುಣಾಮಯಿ ಹೆಣ್ಣು. ಎಲ್ಲಾ ಕ್ಷೇತ್ರದಲ್ಲೂ ಯಶಸ್ವಿಯಾಗಿ ನಿರ್ವಹಿಸುವ ಸಾಮರ್ಥ್ಯ ಪ್ರತಿ ಹೆಣ್ಣು ಮಕ್ಕಳು ಹೊಂದಿದ್ದಾರೆ ಎಂದರು.

ಪ್ರಸೂತಿ ತಜ್ಞ ಡಾ.ಡಿ.ಎಂ.ಗೌಡ ಮಾತನಾಡಿ, ಪೋಷಕಾಂಶ ಇರುವ ಆಹಾರವನ್ನು ಗರ್ಭಿಣಿಯರು ಹೆಚ್ಚು ಸೇವನೆ ಮಾಡಬೇಕು. ಅಪೌಷ್ಟಿಕತೆ ರಕ್ತ ಹೀನತೆಗೆ ಕಾರಣವಾಗಲಿದ್ದು ಆರೋಗ್ಯ ಸಮಸ್ಯೆ ಉಂಟಾಗಲಿದ್ದು, ಆಹಾರ ಸೇವನೆ ಬಗ್ಗೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು. ಪೋಷಕರು ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವತ್ತ ಆಸಕ್ತಿ ವಹಿಸಬೇಕು, ಚಿಕ್ಕ ವಯಸ್ಸಿಗೆ ಹೆಣ್ಣುಮಕ್ಕಳಿಗೆ ಮದುವೆ ಮಾಡಿ ವೈವಾಹಿಕ ಜೀವನದಲ್ಲಿ ಅಪೌಷ್ಟಿಕತೆಯಿಂದ ಬಳಲುವಂತೆ ಮಾಡಬಾರದು ಎಂದರು.

ಇದೇ ಸಂದರ್ಭದಲ್ಲಿ ತಾವರೆಕೆರೆ ಗ್ರಾಮ ಪಂಚಾಯತಿ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ತಾವರೆಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಸುಷ್ಮಾ ಯಶೋಧರ ಗೌಡ, ಉಪಾಧ್ಯಕ್ಷ ಟಿ.ಬಿ. ಶಿವಕುಮಾರ್‌, ಶಿರಾ ವಕೀಲರ ಸಂಘದ ಅಧ್ಯಕ್ಷ ಎಚ್‌.ಪಿ .ಧರಣೇಶ್‌ ಗೌಡ, ಪ್ರಧಾನ ಕಾರ್ಯದರ್ಶಿ ಎಚ್‌. ಗುರುಮೂರ್ತಿ ಗೌಡ, ಪಿಡಿಒ ಎನ್‌. ನಾಗರಾಜ್‌, ಅಭಿಲಾಶ, ಭೂಮಿಕ ಕೃಷ್ಣಮೂರ್ತಿ, ಶಿಕ್ಷಕಿ ರಶ್ಮಿ, ತಾವರೆಕೆರೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತರು ಹಾಜರಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ