ಮಂಗಳವಾರ, ಮೇ 7, 2024
ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಸರಿಲ್ಲದ 21 ಅಂಡಮಾನ್ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಟ್ಟ ಪ್ರಧಾನಿ ಮೋದಿ

Twitter
Facebook
LinkedIn
WhatsApp
PM Modi 1

ನವದೆಹಲಿ (ಜನವರಿ 23, 2023): ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವ. ಈ ಹಿನ್ನೆಲೆ, ಈ ಮಹತ್ತರ ದಿನದ ನೆನಪಿಗಾಗಿ ಕೇಂದ್ರ ಸರ್ಕಾರವು 2021 ರಲ್ಲಿ ಜನವರಿ 23 ಅನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿತ್ತು. ಈ ಹಿನ್ನೆಲೆ ಈ ಸಂದರ್ಭದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದೊಡ್ಡ ಹೆಸರಿಸದ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಡಲಾಗಿದೆ. ಅಲ್ಲದೆ, ಈ ಹಿಂದೆ ರಾಸ್ ಐಲ್ಯಾಂಡ್ಸ್ ಎಂದು ಕರೆಯಲಾಗುತ್ತಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಾಗಿದ್ದ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಸಹ ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಈ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಉಪಸ್ಥಿತರಿದ್ದರು.

ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣದ ಬಳಿ ಪಾಕಿಸ್ತಾನಿ ನುಸುಳುಕೋರರ ವಿರುದ್ಧ ಹೋರಾಡುವಾಗ ನವೆಂಬರ್ 3, 1947 ರಂದು ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಮೊದಲ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಸೋಮನಾಥ್ ಶರ್ಮಾ ಅವರ ಹೆಸರನ್ನು ಹೆಸರಿಸದ ಅತಿದೊಡ್ಡ ದ್ವೀಪಕ್ಕೆ ಇಡಲಾಗಿದೆ.

“ದೇಶದ ನಿಜಜೀವನದ ಹೀರೋಗಳಿಗೆ ಸರಿಯಾದ ಗೌರವವನ್ನು ನೀಡುವುದು ಯಾವಾಗಲೂ ಪ್ರಧಾನ ಮಂತ್ರಿಯ ಅತ್ಯುನ್ನತ ಆದ್ಯತೆಯಾಗಿದೆ. ಈ ಮನೋಭಾವದೊಂದಿಗೆ ಮುಂದುವರಿಯುತ್ತಾ, ಈಗ ದ್ವೀಪ ಸಮೂಹದ 21 ದೊಡ್ಡ ಹೆಸರಿಸದ ದ್ವೀಪಗಳಿಗೆ 21 ಪರಂ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರಿಸಲು ನಿರ್ಧರಿಸಲಾಗಿದೆ” ಎಂದೂ ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೆಸರಿಸದ ಅತಿದೊಡ್ಡ ದ್ವೀಪಕ್ಕೆ ಮೊದಲ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗಿದೆ. ಹಾಗೆ, ಎರಡನೇ ಅತಿ ದೊಡ್ಡ ಹೆಸರಿಲ್ಲದ ದ್ವೀಪಕ್ಕೆ ಎರಡನೇ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರು, ಹೀಗೆ ಹೆಸರು ಇಡಲಾಗಿದೆ. ರಾಷ್ಟ್ರದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ರಕ್ಷಿಸಲು ಅಂತಿಮ ತ್ಯಾಗ ಮಾಡಿದ ನಮ್ಮ ವೀರರಿಗೆ ಈ ಹಂತವು ಶಾಶ್ವತ ಗೌರವವಾಗಿದೆ ಎಂದೂ ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ