ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೈಕಮಾಂಡ್‌ ಹೇಳಿದರೆ ದೇವನಹಳ್ಳಿಯಿಂದ ಸ್ಪರ್ಧೆ: ಮುನಿಯಪ್ಪ

Twitter
Facebook
LinkedIn
WhatsApp
ಹೈಕಮಾಂಡ್‌ ಹೇಳಿದರೆ ದೇವನಹಳ್ಳಿಯಿಂದ ಸ್ಪರ್ಧೆ: ಮುನಿಯಪ್ಪ

ಬೆಂಗಳೂರು (ನ.17): ‘ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಳೆದ ಒಂದು ವರ್ಷದಿಂದ ಒತ್ತಡ ಇದೆ. ಹೈಕಮಾಂಡ್‌ ಹೇಳಿದರೆ ಸ್ಪರ್ಧಿಸಬೇಕಾಗುತ್ತದೆ. ಆದರೆ ಅಂತಿಮ ನಿರ್ಧಾರ ಪಕ್ಷದ್ದೇ’ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಚುನಾವಣೆಯಲ್ಲಿ ಪ್ರತಿಯೊಂದು ಸೀಟಿನ ಗೆಲುವೂ ಸಹ ಮುಖ್ಯವಾಗುತ್ತದೆ. 

ಹೀಗಾಗಿ ಹೈಕಮಾಂಡ್‌ ತೀರ್ಮಾನದಂತೆ ನಾವು ನಡೆದುಕೊಳ್ಳಬೇಕು. ಇಲ್ಲಿಯವರೆಗೆ ಅವರು ಏನೂ ಹೇಳಿಲ್ಲ. ಆದರೆ ಒಂದು ವರ್ಷದಿಂದ ದೇವನಹಳ್ಳಿಯಿಂದ ಸ್ಪರ್ಧಿಸಲು ಒತ್ತಾಯವಿದೆ. ಹೈಕಮಾಂಡ್‌ ಹೇಳಿದರೆ ಸ್ಪರ್ಧಿಸಬೇಕಾಗುತ್ತದೆ’ ಎಂದು ಹೇಳಿದರು. ಪ್ರತಿಯೊಂದು ಕ್ಷೇತ್ರದ ಬಗ್ಗೆಯೂ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗುತ್ತದೆ. ಕ್ಷೇತ್ರಗಳ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಚರ್ಚಿಸಿ ಅಂತಿಮವಾಗಿ ಹೈಕಮಾಂಡ್‌ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು.

ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ: ಮುಂದಿನ ಮುಖ್ಯಮಂತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಈಗ ಅಪ್ರಸ್ತುತ. ಚುನಾವಣೆಯಲ್ಲಿ ಗೆದ್ದ ಬಳಿಕ ಅದನ್ನು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಆದರೆ ಪಕ್ಷದ ಗೆಲುವಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇವನಹಳ್ಳಿ ಕ್ಷೇತ್ರದಿಂದ ಮುನಿಯಪ್ಪ ಅಖಾಡಕ್ಕೆ?: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಅವರು ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವ ಸಂಭವ ಇದೆ.

ಪರಿಶಿಷ್ಟಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಸ್ಥಳೀಯ ಕಾಂಗ್ರೆಸ್ಸಿಗರ ಒತ್ತಾಯವಿದೆ. ಹೀಗಾಗಿ ನೆರೆ ಜಿಲ್ಲೆಯವರಾದ ಹಾಗೂ ಸಮುದಾಯದ ಮತ, ವೈಯಕ್ತಿಕ ವರ್ಚಸ್ಸನ್ನೂ ಹೊಂದಿರುವ ಕೆ.ಎಚ್‌.ಮುನಿಯಪ್ಪ ಅವರಿಗೆ ದೇವನಹಳ್ಳಿಯಿಂದ ಸ್ಪರ್ಧಿಸುವಂತೆ ಒತ್ತಡ ಹೆಚ್ಚಾಗಿದೆ. ಇದಕ್ಕೆ ಹೈಕಮಾಂಡ್‌ ಸಹ ಪೂರಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ದೇವನಹಳ್ಳಿಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮುನಿಯಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕ್ಷೇತ್ರದಲ್ಲಿ 2008ರ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಿಲ್ಲ. 2008ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದ ವೆಂಕಟಸ್ವಾಮಿ ಅವರಿಗೆ 2013 ಹಾಗೂ 18ರಲ್ಲಿ ಅವಕಾಶ ನೀಡಿದ್ದರೂ ಗೆಲುವು ಸಾಧಿಸಿಲ್ಲ. ಹೀಗಾಗಿ ಎರಡೂ ಬಾರಿ ಜೆಡಿಎಸ್‌ ಗೆಲುವು ಸಾಧಿಸಿತ್ತು. 2018ಕ್ಕೆ ಹೋಲಿಸಿದರೆ ಕ್ಷೇತ್ರದ ಸನ್ನಿವೇಶ ಸಂಪೂರ್ಣವಾಗಿ ಬದಲಾಗಿದೆ. ಹೀಗಾಗಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಕೆ.ಎಚ್‌.ಮುನಿಯಪ್ಪ ಅವರ ಸಮುದಾಯದ ಮತಗಳು ದೇವನಹಳ್ಳಿಯಲ್ಲಿ ಹೆಚ್ಚಿವೆ. ಜತೆಗೆ ಹಿರಿಯ ನಾಯಕರಾಗಿದ್ದು ಹಲವು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ ಅವರು ಸ್ಪರ್ಧಿಸಿದರೆ ಗೆಲುವು ಸುಲಭವಾಗಲಿದೆ. ಹೀಗಾಗಿ ಅವರೇ ಸ್ಪರ್ಧಿಸಬೇಕು ಎಂದು ಒತ್ತಾಯ ಕೇಳಿ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ