ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೈಕಮಾಂಡ್‌ ಹೇಳಿದರೆ ವರುಣದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
ಹೈಕಮಾಂಡ್‌ ಹೇಳಿದರೆ ವರುಣದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

ಮೈಸೂರು (ಡಿ.09): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೈಕಮಾಂಡ್‌ ಹೇಳಿದರೆ ವರುಣ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹದಿನಾರು ಮೋಳೆ ಗ್ರಾಮದಲ್ಲಿ ಗುರುವಾರ ಉಪ್ಪಾರ ಸಮೂದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವರುಣದಿಂದಲೇ ಸ್ಪರ್ಧಿಸಬೇಕು ಎಂದ ಸಭಿಕರ ಆಗ್ರಹಕ್ಕೆ ಪ್ರತಿಕ್ರಿಯಿಸಿ, ನಾನು ಯಾವತ್ತೂ ವರುಣ ಕ್ಷೇತ್ರದ ಜನರನ್ನು ಮರೆಯುವುದಿಲ್ಲ. 

ಮೊದಲ ಬಾರಿ ಇಲ್ಲಿಂದ ಗೆದ್ದಾಗ ಪ್ರತಿಪಕ್ಷ ನಾಯಕನಾದೆ. ಎರಡನೇ ಬಾರಿ ಗೆದ್ದಾಗ ಮುಖ್ಯಮಂತ್ರಿಯಾದೆ. ಡಿ. ದೇವರಾಜ ಅರಸು ಅವರ ನಂತರ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರೈಸಿದ್ದು ನಾನೇ ಎಂದರು. ಮುಖ್ಯಮಂತ್ರಿ ಆಗುವುದು ಅಷ್ಟುಸುಲಭದ ಮಾತಲ್ಲ. ನಾನು ಸಿಎಂ ಆಗಿದ್ದಾಗ ರಾಜ್ಯದ ಜನಸಂಖ್ಯೆ ಆರೂವರೆ ಕೋಟಿ ಇತ್ತು. ಈಗ ಏಳು ಕೋಟಿಯಾಗಿದೆ. ನೀವು ಇಲ್ಲಿಂದಲೇ ಸ್ಪರ್ಧಿಸಿ ಎಂದು ಕರೆಯುತ್ತಿದ್ದೀರಿ. ನಾನು ಹಾಲಿ ಶಾಸಕನಾಗಿರುವ ಬಾದಾಮಿ ಜನರು ಮತ್ತೆ ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಕೋಲಾರ ಕ್ಷೇತ್ರದಿಂದಲೂ ಆಹ್ವಾನ ಬಂದಿದೆ. 

ಆದರೆ ಅದು ಇಲ್ಲಿ ನಡೆಯಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಗುಜರಾತ್‌ನಲ್ಲಿ ಶೇ.40 ಸರ್ಕಾರ ಇತ್ತು ಅಂತ ಯಾರಾದರೂ ಹೇಳಿದ್ರಾ? ಅಷ್ಟುದುಡ್ಡು ಖರ್ಚು ಮಾಡಿದರೂ ಆಪ್‌ 6 ಸ್ಥಾನವಷ್ಟೇ ಪಡೆದಿದೆ. ಆಪ್‌ನಿಂದಾಗಿಯೇ ಕಾಂಗ್ರೆಸ್‌ ಮತ ವಿಭಜನೆ ಆಗಿದೆ ಎಂದು ಅವರು ಹೇಳಿದರು. ಹೋಯ್ತು ಮೋದಿ ಹವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ