ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೈಕೋರ್ಟ್ ಮಹತ್ವದ ಆದೇಶ:ಎಸಿಬಿ ರದ್ದು...! 6 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕ ಯಶಸ್ಸು : ಆಮ್ ಆದ್ಮಿ

Twitter
Facebook
LinkedIn
WhatsApp
ಹೈಕೋರ್ಟ್ ಮಹತ್ವದ ಆದೇಶ:ಎಸಿಬಿ ರದ್ದು…! 6 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕ ಯಶಸ್ಸು : ಆಮ್ ಆದ್ಮಿ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.

ಎಸಿಬಿಯ ಸಂವಿಧಾನವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆಗೆ ಅಂಗೀಕರಿಸಿತ್ತು. 2016ರ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರವು ಎಸಿಬಿ ರಚನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಅಧಿಕಾರವನ್ನು ಕರ್ನಾಟಕ ಲೋಕಾಯುಕ್ತದಿಂದ ಹಿಂಪಡೆದು ಹೊರಡಿಸಿದ ಅಧಿಸೂಚನೆಗಳನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ಇದೇ ವೇಳೆ ಎಸಿಬಿ ತನ್ನ ವ್ಯಾಪ್ತಿಯಲ್ಲಿರುವ ಪ್ರಕರಣಗಳು ಮತ್ತು ಅಧಿಕಾರಿಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲು ಹೈಕೋರ್ಟ್ ನಿರ್ದೇಶನ ನೀಡಿದ್ದು, ಅವರು ಆ ಪ್ರಕರಣಗಳನ್ನು ಮುಂದೆ ಕೈಗೆತ್ತಿಕೊಳ್ಳಬೇಕು ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ಆ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ.  ಅಂತೆಯೇ ಸಾರ್ವಜನಿಕರ ಹಿತದೃಷ್ಟಿಯಿಂದ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮತ್ತು ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರಾಗಿ ಸಮರ್ಥ ವ್ಯಕ್ತಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

6 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕ ಯಶಸ್ಸು : ಆಮ್ ಆದ್ಮಿ

ಹೈಕೋರ್ಟ್ ಮಹತ್ವದ ಆದೇಶ:ಎಸಿಬಿ ರದ್ದು…! 6 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕ ಯಶಸ್ಸು : ಆಮ್ ಆದ್ಮಿ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶಕ್ಕೆ ಎಲ್ಲೆಡೆ ವ್ಯಾಪಕ ಪ್ರಶಂಸೆಯ ಅಭಿಪ್ರಾಯಗಳು ಬರುತ್ತಿದ್ದು, ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಘಟಕ ಕೂಡ ಸ್ವಾಗತಿಸಿದೆ.

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಆಪ್‌ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು ಎಂದು ಆಗ್ರಹಿಸಿರುವ ಪೃಥ್ವಿ ರೆಡ್ಡಿ, ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ ಎಂದು ಟೀಕಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ