ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ; ಕೆ.ಹೆಚ್.ಮುನಿಯಪ್ಪ
ಬೆಂಗಳೂರು: ಹೊಸ ಎಪಿಎಲ್ , ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಕಾರಣ ಏನು ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆಯೇ, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಹೊಸ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದು ಈ ಪೋರ್ಟ್ಲ್ ಅನ್ನು ಆರಂಭಮಾಡಲಿಲ್ಲ. ಸರ್ಕಾರ ಅನುಮತಿ ನೀಡಿದ ನಂತರವಷ್ಟೇ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಲಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ‘ಗ್ಯಾರಂಟಿ’ಗಳ ಲಾಭವನ್ನು ಪಡೆದುಕೊಳ್ಳಲು ಪಡಿತರ ಚೀಟಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿ ಮಾಡಿಸಲು ಜನರು ಮುಗಿಬೀಳುತ್ತಿದ್ದಾರೆ. ಹೊಸದಾಗಿ ಪಡಿತರ ಚೀಟಿ ಸಲ್ಲಿಸಲು ‘ಗ್ರಾಮ ಒನ್’ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಜನರು ನಿತ್ಯವೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ‘ಗ್ಯಾರಂಟಿ’ ಯೋಜನೆಗಳಿಗೆ ಪಡಿತರ ಚೀಟಿ ಮಾನದಂಡವಾಗಿದ್ದರಿಂದ ಅರ್ಜಿ ಸಲ್ಲಿಸಲು ಬರುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯಕ್ಕೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಸರ್ಕಾರ ಅನುವು ಮಾಡಿಕೊಟ್ಟಿಲ್ಲ.
ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್ – ಇಂದಿನಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ :
ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ.ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಲಿದ್ದಾರೆ.
ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ.. ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.