ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸ ವರ್ಷಕ್ಕೆ ಸಿಲಿಂಡರ್​ ದರ ಇಳಿಕೆ!

Twitter
Facebook
LinkedIn
WhatsApp
WhatsApp Image 2022 01 01 at 2.45.31 PM 1

ಹೊಸ ವರ್ಷದ ಸಂಭ್ರಮದಲ್ಲಿರುವ ದೇಶದ ಜನತೆಗೆ ವರ್ಷದ ಮೊದಲ ದಿನವೇ ಬೆಲೆ ಇಳಿಕೆಯ ಗುಡ್​ ನ್ಯೂಸ್​ ಸಿಕ್ಕಿದೆ. 2021ರಲ್ಲಿ ದಿನನಿತ್ಯ ಬಳಕೆಯ ವಸ್ತುಗಳ ದರ ಏರಿಕೆಯಿಂದ ಕಂಗೆಟ್ಟಿದ್ದ ದೇಶದ ಜನತೆಗೆ ನ್ಯಾಷನಲ್​ ಆಯಿಲ್​ ಮಾರ್ಕೆಟಿಂಗ್​​ ಕಂಪನಿಗಳು ರಿಲೀಫ್​ ನೀಡಿವೆ. ಇಂದಿನಿಂದ ಅನ್ವಯವಾಗುವಂತೆ 19 ಕೆಜಿ ತೂಕದ ಕಮರ್ಷಿಯಲ್​ ಎಲ್​​ಪಿಸಿ ಸಿಲಿಂಡರ್​ಗಳ ಬೆಲೆಯಲ್ಲಿ 102.50 ರೂಪಾಯಿ ಕಡಿತ ಮಾಡಲಾಗಿದೆ.

ಬೆಲೆ ಇಳಿಕೆಯ ಬಳಿಕ ದೆಹಲಿಯಲ್ಲಿ ಕಮರ್ಷಿಯಲ್​ ಎಲ್​ಪಿಜಿ ಸಿಲಿಂಡರ್​ಗಳ ಬೆಲೆ 1998.50 ರೂಪಾಯಿ ಆಗಿದೆ. ಕಳೆದ ತಿಂಗಳು ಅಂದರೆ ಡಿಸೆಂಬರ್​ 1ರಂದು 19 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯಲ್ಲಿ 100 ರೂಪಾಯಿ ಏರಿಕೆ ಮಾಡಲಾಗಿತ್ತು. ಇದಾದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್​ಗಳ ಬೆಲೆ 2101 ರೂಪಾಯಿ ಆಗಿತ್ತು. ಇದೀಗ ಬೆಲೆ ಇಳಿಕೆ ಮಾಡಿರುವುದರಿಂದ ಜನಸಾಮನ್ಯರು ನಿರಾಳರಾಗಿದ್ದಾರೆ. ಅಲ್ಲದೇ ವಾಣಿಜ್ಯ ಸಿಲಿಂಡರ್​ಗಳ ಬೆಲೆ ಇಳಿಕೆಯಿಂದ ಹೋಟೆಲ್​​, ರೆಸ್ಟಾರೆಂಟ್​, ಟೀ ಸ್ಟಾಲ್​ಗಳು ಬೀದಿ ಬದಿಯ ತಿಂಡಿ ತಿನಿಸು ಮಾರಾಟ ಅಂಗಡಿಗಳಿಗೆ ವರದಾನವಾದಂತಾಗಿದೆ.

ಇನ್ನು ಡಿಸೆಂಬರ್​ಗೂ ಮುನ್ನ ಅಂದರೆ ನವೆಂಬರ್​ 1ರಂದು 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್​ಗಳ ಬೆಲೆ 266 ರೂಪಾಯಿ ಏರಿಕೆ ಮಾಡುವ ಮೂಲಕ ಕಮರ್ಷಿಯಲ್​ ಸಿಲಿಂಡರ್​ಗಳ ಬೆಲೆ 2000.50 ರೂಪಾಯಿ ಮಾಡಲಾಗಿತ್ತು. ಆದರೆ ಇದೀಗ 1998 ರೂಪಾಯಿಗಳಿಗೆ ನಿಮಗೆ ಸಿಲಿಂಡರ್​ ಸಿಗಲಿದೆ. ಆದರೆ 14.2 ಕೆಜಿ, 10 ಕೆಜಿ ಹಾಗೂ 5 ಕೆಜಿ ಕಾಂಪೋಸಿಟ್​ ಸಿಲಿಂಡರ್​ಗಳು ಸೇರಿದಂತೆ ದೇಶಿ ಸಿಲಿಂಡರ್​ಗಳ ಬೆಲೆಯಲ್ಲಿ ಸದ್ಯ ಯಾವುದೇ ಇಳಿಕೆ ಕಂಡು ಬಂದಿಲ್ಲ.

ಭಾರತದ ಎಲ್ಲಾ ಕೇಂದ್ರಾಡಳಿತ ಪ್ರದೇಶ ಹಾಗೂ ರಾಜ್ಯಗಳಲ್ಲಿ ಪ್ರತಿ ತಿಂಗಳು ಎಲ್​ಪಿಜಿ ಸಿಲಿಂಡರ್​ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ ಇಂದು ಸಹ ಎಲ್​ಪಿಜಿ ಸಿಲಿಂಡರ್​ಗಳ ದರ ಪರಿಷ್ಕರಣೆಯಾಗಿದ್ದು ಜನತೆಗೆ ಜಾಕ್​​ಪಾಟ್​ ಹೊಡೆದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು