ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10 ವಿಕೆಟ್‌ ಕಿತ್ತು ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಅಜಾಜ್‌ ಪಟೇಲ್‌.

Twitter
Facebook
LinkedIn
WhatsApp
10 ವಿಕೆಟ್‌ ಕಿತ್ತು ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಅಜಾಜ್‌ ಪಟೇಲ್‌.

ಮುಂಬೈ: ನ್ಯೂಜಿಲೆಂಡ್‌ ಸ್ಪಿನ್ನರ್‌ ಭಾರತೀಯ ಮೂಲದ ಅಜಾಜ್‌ ಪಟೇಲ್‌ ಟೆಸ್ಟ್‌ ಕ್ರಿಕೆಟ್‌ ಇನ್ನಿಂಗ್ಸ್‌ ಒಂದರಲ್ಲಿ 10 ವಿಕೆಟ್‌ ಕಿತ್ತು ಇತಿಹಾಸ ನಿರ್ಮಿಸಿದ್ದಾರೆ.ಈ ಮೂಲಕ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಎಲ್ಲಾ 10 ವಿಕೆಟ್‌ ಪಡೆದ ಮೂರನೇ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಮೊದಲು ಜಿಮ್‌ ಲೇಕರ್ ಮತ್ತು ಅನಿಲ್‌ ಕುಂಬ್ಳೆ ಎಲ್ಲಾ 10 ವಿಕೆಟ್‌ ಪಡೆದಿದ್ದರು. 144 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇನಿಂಗ್ಸ್‌ವೊಂದರಲ್ಲಿ 10 ವಿಕೆಟ್ ಕಬಳಿಸಿದ ಮೂರನೇ ಸ್ಪಿನ್ನರ್ ದಾಖಲೆಯನ್ನು ಅಜಾಜ್‌ ಪಟೇಲ್‌ ಬರೆದಿದ್ದಾರೆ.

ಮುಂಬೈ ಮೂಲದ ಅಜಾಜ್ ಪಟೇಲ್ ಮಾರಕ ಬೌಲಿಂಗ್‌ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 325 ರನ್‌ಗಳಿಗೆ ಆಲೌಟ್‌ ಆಗಿದೆ.
47.5 ಓವರ್‌ ಎಸೆದ ಅಜಾಜ್‌ ಪಟೇಲ್ 12 ಓವರ್‌ ಮೇಡನ್‌ ಎಸೆದು 119 ರನ್‌ ನೀಡಿ 10 ವಿಕೆಟ್‌ ಪಡೆದಿದ್ದಾರೆ. ಭಾರತದಲ್ಲಿ ನೆಲದಲ್ಲಿ ಈ ಸಾಧನೆ ಮಾಡಿದ ಎರಡನೇ ಬೌಲರ್‌ ಅಜಾಜ್‌ ಪಟೇಲ್‌ ಆಗಿದ್ದಾರೆ. ಅಷ್ಟೇ ಅಲ್ಲದೇ ಭಾರತದ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ವಿದೇಶಿ ಬೌಲರ್‌ ಎಂಬ ದಾಖಲೆ ಬರೆದಿದ್ದಾರೆ.  5 ಮಂದಿ ಆಟಗಾರರು ಕ್ಯಾಚ್‌ ನೀಡಿ ಔಟಾಗಿದ್ದರೆ 3 ಮಂದಿ ಎಲ್‌ಬಿಡಬ್ಲ್ಯೂ, ಇಬ್ಬರನ್ನು ಅಜಾಜ್‌ ಬೌಲ್ಡ್‌ ಮಾಡಿದ್ದಾರೆ.

1956ರಲ್ಲಿ ಇಂಗ್ಲೆಂಡ್‌ನ ಆಫ್‌ ಸ್ಪಿನ್ನರ್ ಜಿಮ್ ಲೇಕರ್, ಆಸ್ಟ್ರೇಲಿಯಾ ವಿರುದ್ದ 10 ವಿಕೆಟ್‌ ಕಿತ್ತಿದ್ದರು. 1999ರಲ್ಲಿ ಕನ್ನಡಿಗ ಅನಿಲ್‌ ಕುಂಬ್ಳೆ ದೆಹಲಿಯ ಫಿರೋಜ್‌ ಶಾ ಕೋಟ್ಲಾ(ಅರುಣ್‌ ಜೇಟ್ಲಿ ಮೈದಾನ) ಮೈದಾನದಲ್ಲಿ ಪಾಕಿಸ್ತಾನ ವಿರುದ್ದ ಎಲ್ಲಾ 10 ವಿಕೆಟ್ ಕಬಳಿಸಿ ಭಾರತದ ಪರ ದಾಖಲೆ ನಿರ್ಮಿಸಿದ್ದರು.
ವಾಂಖೆಡೆ ಕ್ರಿಕೆಟ್‌ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ 221 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡಕ್ಕೆ ಅಜಾಜ್ ಪಟೇಲ್ ಆರಂಭದಲ್ಲೇ ಶಾಕ್‌ ನೀಡಿದರು. 

ತಾವೆಸೆದ ಮೊದಲ ಓವರ್‌ನಲ್ಲೇ ಅಜಾಜ್ ಪಟೇಲ್ ಸತತ 2 ವಿಕೆಟ್ ಕಿತ್ತಿದ್ದರು. ಮಯಾಂಕ್‌ ಅಗರ್‌ವಾಲ್‌ 150 ರನ್‌(311 ಎಸೆತ, 17 ಬೌಂಡರ್‌, 4 ಸಿಕ್ಸರ್‌) ಹೊಡೆದು 8ನೇಯವರಾಗಿ ಔಟಾದರು. ವೃದ್ಧಿಮಾನ್‌ ಸಹಾ 27 ರನ್‌, ಅಕ್ಷರ್‌ ಪಟೇಲ್‌ 52 ರನ್‌(128 ಎಸೆತ, 5 ಬೌಂಡರಿ, 1 ಸಿಕ್ಸರ್‌) ಹೊಡೆದು ಔಟಾದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು