ಪದವಿ ಕೋರ್ಸ್ಗಳ ಶುಲ್ಕ ಶೇ10ರಷ್ಟು ಏರಿಕೆ...!
Twitter
Facebook
LinkedIn
WhatsApp
ದುಬಾರಿ.. ದುಬಾರಿ.. ಎಲ್ಲವೂ ದುಬಾರಿ… ವಿಶೇಷ ದಿನಗಳಲ್ಲಿ ಹಣ್ಣು, ಪೂಜಾ ಸಾಮಾಗ್ರಿಗಳು ದುಬಾರಿ. ಅಕ್ಕಿಯಿಂದ ಆಹಾರ ಪದಾರ್ಥಗಳು ದುಬಾರಿ. ಮನೆಯಿಂದ ಹೊರಗಡೆ ಕಾಲಿಟ್ಟರೆ ಕಡಿಮೆ ಅಂದರೂ ಐದರಿಂದ ಒಂದು ಸಾವಿರ ರೂಪಾಯಿ ಬೇಕು. ಇಂತಹ ದುಬಾರಿ ದುನಿಯಾದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದು ಪೋಷಕರಿಗೆ ಸವಾಲಿನ ಕೆಲಸ.
ಹೀಗಿರುವಾಗ ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಬರೆ ಎಳೆದಿದ್ದ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಶಾಕ್ ಕೊಟ್ಟಿದೆ.
ಹೀಗಿರುವಾಗ ಪದವಿ ಕೋರ್ಸ್ಗಳ ಶುಲ್ಕ ಶೇ10ರಷ್ಟು ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ. ಇದು ಬಡ ಪೋಷಕರಿಗೆ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ಪಿಯುಸಿ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ಕನಸ್ಸು ಕಾಣುವ ವಿದ್ಯಾರ್ಥಿಗಳ ಮೇಲೆ ಇದು ಪರಿಣಾಮ ಬೀರಲಿದೆ.
ಬಿಕಾಂ, ಬಿಎ, ಬಿಎಸ್‌ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ.10ರಷ್ಟು ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ಯೂನಿವರ್ಸಿಟಿಗಳಲ್ಲಿ ಶುಲ್ಕವನ್ನು ಏರಿಕೆ ಮಾಡಬಹುದು.
ವಿಶ್ವವಿದ್ಯಾಲಯಗಳ ಆದಾಯ ಕೊರತೆನ್ನು ಎದುರಿಸುತ್ತಿವೆ. ಇದರಿಂದಾಗಿ ಪ್ರಸಕ್ತ ವರ್ಷದಲ್ಲಿ ಶೇ.10ರಷ್ಟು ಶುಲ್ಕ ಹೆಚ್ಚಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಈ ವರ್ಷ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಬಿಸಿ ತಟ್ಟಲಿದೆ. ಈ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಯೂನಿವರ್ಸಿಟಿಗಳಿಗೆ ನೀಡಿ ಈ ಬಗ್ಗೆ ಸಿದ್ಧತೆಗೆ ಸರ್ಕಾರ ಸೂಚನೆ ನೀಡಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪಂಚ ಗ್ಯಾರಂಟಿಗಳಿಂದಾಗಿ ಜನ ಸಾಮಾನ್ಯರ ಆರ್ಥಿಕ ಹೊರೆ ಕಡಿಮೆ ಆಗಿದೆ. ಉಚಿತ ವಿದ್ಯುತ್, ಉಚಿತ ಪ್ರಯಾಣ ಹಾಗೂ ಗೃಹ ಲಕ್ಷ್ಮಿ ಯೋಜನೆಯಿಂದ ಮನೆ ಒಡತಿಗೆ ತಿಂಗಳಿಗೆ ಇಂತಿಷ್ಟು ಹಣವನ್ನು ನೀಡಲಾಗುತ್ತಿದೆ. ಆದರೆ ಈ ಗ್ರಾರಂಟಿಗಳ ಹಣವನ್ನು ತೂಹಿಸಲು ತೆರಿಗೆ ಏರಿಕೆ ಮಾಡಲಾಗಿದೆ. ಇರ ಬಳಿಕ ಕರೆಂಟ್ ಬಿಲ್ ಏರಿಕೆಯಾಯ್ತು, ಮದ್ಯದ ಬೆಲೆ ಕೂಡ ಏರಿಕೆ ಮಾಡಲಾಗಿದೆ. ಈಗ ಕಾಲೇಜು ಶುಲ್ಕ ಏರಿಕೆ ಮಾಡುತ್ತಿರುವುದು ಪೋಷಕರ ಕೆಂಗಣ್ಣಿಗೆ ಗುರಿಯಾಗಿದೆ.