ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ..!

Twitter
Facebook
LinkedIn
WhatsApp
ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ..!

ನವದೆಹಲಿ: ಇತ್ತೀಚಿಗಷ್ಟೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ (Assembly Election) ಫಲಿತಾಂಶ ಹೊರಬಿದ್ದಿದ್ದು, ಅದರಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾದ 10 ಮಂದಿ ಬಿಜೆಪಿ ಸಂಸದರು (MP) ಬುಧವಾರ ತಮ್ಮ ಸಂಸತ್ ಸ್ಥಾನಗಳಿಗೆ ರಾಜೀನಾಮೆ (Resignation) ನೀಡಿದ್ದಾರೆ.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ (JP Nadda) ಅವರ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದು, ಶಾಸಕರಾಗಿ ಮುಂದುವರೆಯಲಿದ್ದಾರೆ. ಮಧ್ಯಪ್ರದೇಶದಿಂದ (Madhya Pradesh) ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಸ್ಥಾನದಿಂದ (Rajasthan) ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ರಾಜೀನಾಮೆ ನೀಡಿದ್ದಾರೆ. ಇನ್ನೂ ಛತ್ತೀಸ್‌ಗಢದಿಂದ (Chattisgarh) ಅರುಣ್ ಸಾವೊ ಮತ್ತು ಗೋಮತಿ ಸಾಯಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಬಾಬಾ ಬಾಲಕನಾಥ್ ಮತ್ತು ರೇಣುಕಾ ಸಿಂಗ್ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ. ಇವರಿಬ್ಬರು ಶೀಘ್ರದಲ್ಲೇ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಬಹುಮತಗಳನ್ನು ಪಡೆದು ಕಾಂಗ್ರೆಸ್ ಅನ್ನು ಮಣಿಸಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಈ ನಡುವೆಯೇ ಸಂಸದರು ರಾಜೀನಾಮೆ ನೀಡಿದ್ದಾರೆ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ (Telangana) ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಕಮಲ್ ನಾಥ್ ರಾಜೀನಾಮೆ?

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ (Vidhanasabha Election) ಹೀನಾಯ ಸೋಲಿನ ಬಳಿಕ ಮಧ್ಯಪ್ರದೇಶ ಕಾಂಗ್ರೆಸ್ (Madhya Pradesh Congress) ಸಮಿತಿ ಅಧ್ಯಕ್ಷ ಕಮಲ್ ನಾಥ್ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲೇ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಳೆದ ತಿಂಗಳು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು, ಕಳೆದ ಭಾನುವಾರ ಮತ ಎಣಿಕೆ ನಡೆದಿತ್ತು. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ 116 ಮ್ಯಾಜಿಕ್ ಸಂಖ್ಯೆಯಾಗಿದೆ. ಬಿಜೆಪಿಯು 163 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತ ಪಡೆದರೆ, ಕಾಂಗ್ರೆಸ್ 66 ಸ್ಥಾನ ಗಳಿಸಿಕೊಳ್ಳುವುದಕ್ಕೆ ಏದುಸಿರು ಬಿಟ್ಟಿದೆ. ಈ ಎಲ್ಲ ಬೆಳವಣಿಗೆಗಳ ನಂತರ ಕಮಲ್ ನಾಥ್ ಇಂದು ಖರ್ಗೆ ಅವರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎನ್ನಲಾಗಿದೆ.

ಚುನಾವಣೆಗೂ ಮೊದಲು ಸೀಟು ಹಂಚಿಕೆ ಕುರಿತಂತೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ (Nithish Kumar) ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಇಂಡಿಯಾ ಒಕ್ಕೂಟದ ಅನೇಕ ನಾಯಕರ ವಿರುದ್ಧ ಕಮಲ್ ನಾಥ್ (Kamal Nath) ನೀಡಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ವರಿಷ್ಠರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಚುನಾವಣಾ ಪೂರ್ವ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದ ಸಮಾಜವಾದಿ ಪಕ್ಷವು ಕೇವಲ ನಾಲ್ಕರಿಂದ ಆರು ಸ್ಥಾನಗಳನ್ನು ಮಾತ್ರ ಕೇಳಿತ್ತು. ಜೆಡಿಯು ಕೇವಲ ಒಂದು ಸ್ಥಾನವನ್ನು ಮಾತ್ರ ಕೇಳಿದ್ದರೂ ಕಮಲ್ ನಾಥ್ ಒಪ್ಪಿರಲಿಲ್ಲ ಎನ್ನಲಾಗಿದೆ. ಅವರ ಈ ನಡೆ `ಇಂಡಿಯಾ ಕೂಟ’ದ ನಾಯಕರನ್ನು ಕೆಣಕಿತ್ತು. ಜೊತೆಗೆ ಚುನಾವಣೆ ಫಲಿತಾಂಶದ ನಂತರ ಕಮಲ್ ನಾಥ್ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗದೆ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದ ಬಗ್ಗೆಯೂ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist