ಗುರುವಾರ, ಮೇ 2, 2024
Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10 ರೂಗೆ 150 ಕಿ.ಮೀ ಮೈಲೇಜ್, 6 ಜನರ ಪ್ರಯಾಣಸಿಬಲ್ಲ ಎಲೆಕ್ಟ್ರಿಕ್ ಬೈಕ್‌ಗೆ ಮನಸೋತ ಆನಂದ್ ಮಹೀಂದ್ರ!

Twitter
Facebook
LinkedIn
WhatsApp
10 ರೂಗೆ 150 ಕಿ.ಮೀ ಮೈಲೇಜ್, 6 ಜನರ ಪ್ರಯಾಣಸಿಬಲ್ಲ ಎಲೆಕ್ಟ್ರಿಕ್ ಬೈಕ್‌ಗೆ ಮನಸೋತ ಆನಂದ್ ಮಹೀಂದ್ರ!

ಮುಂಬೈ(ಡಿ.01):  ಮಹೀಂದ್ರ ಚೇರ್ಮೆನ್ ಆನಂದ್ ಮಹೀಂದ್ರ ಪ್ರತಿ ಬಾರಿ ಸಾಮಾಜಿಕ  ಜಾಲತಾಣದಲ್ಲಿ ವಿಡಿಯೋ , ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಈ ಬಾರಿ ಆನಂದ್ ಮಹೀಂದ್ರ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ಹಲವರ ಆಸಕ್ತಿ ಡಬಲ್ ಮಾಡಿದೆ. ಭಾರತದ ಎಲೆಕ್ಟ್ರಿಕ್ ವಾಹನ ತಯಾರಿಕೆ, ತಂತ್ರಜ್ಞಾನಕ್ಕೆ ಹೊಸ ಬಾಷ್ಯ ಬರೆದಿದೆ. ಕಾರಣ  12,000 ರೂಪಾಯಿ ಬೆಲೆಯ ಎಲೆಕ್ಟ್ರಿಕ್ ಬೈಕ್ ಕುರಿತು ವಿಡಿಯೋ ಇದಾಗಿದೆ. 10 ರೂಪಾಯಿಯಲ್ಲಿ ಈ ಬೈಕ್ ಚಾರ್ಜ್ ಮಾಡಬಹುದು. ಒಂದು ಸಂಪೂರ್ಣ ಚಾರ್ಜ್‌ಗೆ 150 ಕಿಲೋಮೀಟರ್ ಮೈಲೇಜ್ ನೀಡಲಿದೆ. ಇಷ್ಟೇ ಅಲ್ಲ ಈ ಬೈಕ್‌ನಲ್ಲಿ 6 ಸೀಟ್‌ಗಳಿಗೆ ರೈಡರ್ ಸೇರಿ ಆರು ಮಂದಿ ಆರಾಮವಾಗಿ ಪ್ರಯಾಣಿಸಲು ಸಾಧ್ಯವಿದೆ.

ಸರಳ ಹಾಗೂ ಸಣ್ಣ ವಿನ್ಯಾಸ. ಈ ವಾಹನ ಜಾಗತಿಕ ಮಟ್ಟದಲ್ಲಿ ಅಳವಡಿಸಲು ಸಾಧ್ಯವಿರುವ ತಂತ್ರಜ್ಞಾನವಾಗಿದೆ. ಕಿಕ್ಕಿರಿದ ಯುರೋಪಿಯನ್ ಪ್ರವಾಸಿ ಕೇಂದ್ರಗಲ್ಲಿ ಪ್ರವಾಸಿ ಬಸ್ ಆಗಿ ಸಾಧ್ಯವಿದೆ. ಗ್ರಾಮೀಣ ಪ್ರದೇಶದಲ್ಲಿನ ಹೊಸ ಆವಿಷ್ಕಾರಗಳಿಂದ ನಾನು ಯಾವತ್ತೂ ಪ್ರಭಾವಿತನಾಗುತ್ತೇೆ. ಕಾರಣ ಈ ಗ್ರಾಮೀಣ ಪ್ರದೇಶ ಆವಿಷ್ಕಾರ ತಾಯಿಯಾಗಿದೆ ಎಂದು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿರುವ ವ್ಯಕ್ತಿ ನೂತನ ಎಲೆಕ್ಟ್ರಿಕ್ ವಾಹನ ಕುರಿತು ಮಾಹಿತಿ ನೀಡಿದ್ದಾರೆ. ಈ ವಾಹನದ ಉತ್ಪಾದನಾ ವೆಚ್ಚ 12,000 ರೂಪಾಯಿ. ಒಂದು ಬಾರಿ ಚಾರ್ಜ್ ಮಾಡಿದರೆ 150 ಕಿಲೋಮೀಟರ್ ಮೈಲೇಜ್ ನೀಡಲಿದೆ. ಇಷ್ಟೇ ಅಲ್ಲ 10 ರೂಪಾಯಿಗೆ ಈ ವಾಹನ ಸಂಪೂರ್ಣ ಚಾರ್ಜ್ ಮಾಡಲು ಸಾಧ್ಯವಿದೆ ಎಂದಿದ್ದಾರೆ.

ಸೈಕಲ್ ರೀತಿಯಲ್ಲಿ ಸೀಟ್‌ಗಳನ್ನು ಮಾಡಲಾಗಿದೆ. ಒಬ್ಬರ ಹಿಂದೆ ಒಬ್ಬರಂತೆ ಒಟ್ಟು 6 ಮಂದಿ ಕುಳಿತು ಪ್ರಯಾಣಿಸಬಹುದು. ಆನಂದ್ ಮಹೀಂದ್ರ ಈ ವಿಡಿಯೋ ಹಂಚಿಕೊಂಡ ಬೆನ್ನಲ್ಲೇ ಮೆಚ್ಚುಗೆಗಳ ಸುರಿಮಳೆ ವ್ಯಕ್ತವಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ