ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10 ವರ್ಷದಲ್ಲಿ ಮಾನಸಿಕ ರೋಗಿಗಳು ಹೆಚ್ಚಳ: ಸಚಿವ ಸುಧಾಕರ್‌ ಕಳವಳ

Twitter
Facebook
LinkedIn
WhatsApp
10 ವರ್ಷದಲ್ಲಿ ಮಾನಸಿಕ ರೋಗಿಗಳು ಹೆಚ್ಚಳ: ಸಚಿವ ಸುಧಾಕರ್‌ ಕಳವಳ

ಬೆಂಗಳೂರು (ಡಿ.10): ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ. ಕಳೆದ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕಳವಳ ವ್ಯಕ್ತಪಡಿಸಿದರು. ನಗರ ನಿಮ್ಹಾನ್ಸ್‌ನಲ್ಲಿ ನಡೆಯುತ್ತಿರುವ ಮೆದುಳಿನ ಆರೋಗ್ಯ ಉಪಕ್ರಮ (ಬ್ರೈನ್‌ ಹೆಲ್ತ್‌ ಇನಿಷೆಯೇಟಿವ್‌) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಪಾಶ್ರ್ವವಾಯು (ಸ್ಟ್ರೋಕ್‌), ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 

ಅಂಕಿ-ಅಂಶಗಳ ಪ್ರಕಾರ ಮಾನಸಿಕ ಅನಾರೋಗ್ಯದಿಂದಲೇ ಸುಮಾರು ಶೇ.8ರಷ್ಟು ಜನರು ಸಾವಿಗೀಡಾಗುತ್ತಿದ್ದಾರೆ. ಸಾವಿಗೆ ಕಾರಣವಾಗಿರುವ ಅಂಶಗಳ ಪೈಕಿ ಮಾನಸಿಕ ಅನಾರೋಗ್ಯ 2ನೇ ಸ್ಥಾನ ಪಡೆದಿದೆ’ ಎಂದರು. ‘ನಾವು ಎಷ್ಟುವರ್ಷ ಬದುಕುತ್ತೇವೆ ಅನ್ನುವುದರ ಜೊತೆಗೆ ಹೇಗೆ ಬದುಕುತ್ತೇವೆ ಅನ್ನುವುದು ಕೂಡ ಮುಖ್ಯವಾಗಿದೆ. ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಬೆಂಗಳೂರಿನಲ್ಲಿ ನಿಮ್ಹಾನ್ಸ್‌ನಂತಹ ಸಂಸ್ಥೆ ಇರುವುದು ನಮ್ಮ ರಾಜ್ಯದ ಸೌಭಾಗ್ಯ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್‌ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ ಎಂದು ಹೇಳಿದರು.

ಭಾರತ ಸರ್ಕಾರ ಟೆಲಿ ಮನಸ್‌ ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನವನ್ನು ಮಾಡುತ್ತಿದೆ. ರಾಜ್ಯ ಸರ್ಕಾರ ಪಾಶ್ರ್ವವಾಯು ಚಿಕಿತ್ಸೆ ಒದಗಿಸುವ ಹಬ್‌ ಮತ್ತು ಸ್ಟ್ರೋಕ್‌ ಮಾದರಿ ಕೇಂದ್ರಗಳನ್ನು ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್‌ ನೆರವಿನೊಂದಿಗೆ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು. ನಿಮ್ಹಾನ್ಸ್‌ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ, ಕೇಂದ್ರ ಸರ್ಕಾರದ ನೀತಿ ಆಯೋಗದ ಸದಸ್ಯ ಪ್ರೋ.ವಿನೋದ್‌ ಕೆ ಪೌಲ್‌ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ