ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

100 ಕೋಟಿ ಕೋವಿಡ್ ಲಸಿಕೆ ಮಹತ್ವದ ಸಾಧನೆ – ಡಾ. ಅಶ್ವತ್ಥನಾರಾಯಣ

Twitter
Facebook
LinkedIn
WhatsApp
100 ಕೋಟಿ ಕೋವಿಡ್ ಲಸಿಕೆ ಮಹತ್ವದ ಸಾಧನೆ – ಡಾ. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ 83% ಜನರಿಗೆ (4.15 ಕೋಟಿ ಜನರು) ಕೋವಿಡ್ ಮೊದಲನೇ ಲಸಿಕೆ ಕೊಡಲಾಗಿದೆ. 2.05 ಕೋಟಿ ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎಂದು ರಾಜ್ಯದ ಸಹಕಾರ ಸಚಿವರಾದ ರಾಜ್ಯದ ಉನ್ನತ ಶಿಕ್ಷಣ, ಐಟಿ, ಬಿಟಿ & ಎಸ್‍ಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ|| ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದರು.
ಮಲ್ಲೇಶ್ವರದ ಕಬಡ್ಡಿ ಮೈದಾನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಜೀವನ ಎಂದಿನಂತೆ ನಡೆಯಲು ಆರೋಗ್ಯ ಸಚಿವರು ಮತ್ತು ಸಚಿವ ಸಂಪುಟ ಶ್ರಮಿಸಿದೆ. ಆರ್ಥಿಕ ವಹಿವಾಟು ಕೋವಿಡ್‍ ಪೂರ್ವ ಅವಧಿಗಿಂತ ಹೆಚ್ಚು ಉತ್ತಮವಾಗುವ ಹಂತ ತಲುಪಿದೆ. ಲಸಿಕೆಯಿಂದ ಆಶಾದಾಯಕ ಮತ್ತು ಭರವಸೆದಾಯಕ ಜೀವನ ಸಾಧ್ಯವಾಗಿದೆ ಎಂದು ವಿಶ್ಲೇಷಿಸಿದರು. ಲಸಿಕೆ ಮೂರನೇ ಡೋಸ್ ಕೊಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದರು.
ಕೋವಿಡ್ ನಿಯಂತ್ರಣ ಮತ್ತು ಜನರ ಜೀವನ ರಕ್ಷಣೆ ವಿಚಾರದಲ್ಲಿ ಲಸಿಕೆ ಮಹತ್ವದ ಪಾತ್ರ ವಹಿಸಿದೆ. ವೈದ್ಯರು, ವೈದ್ಯಕೀಯ ಸಿಬ್ಬಂದಿಯ ಶ್ರಮ ಹಾಗೂ ದೇಶದ ನಾಗರಿಕರ ಸಹಕಾರದಿಂದ 100 ಕೋಟಿ ಲಸಿಕೆ ಡೋಸ್ ಕೊಡಲು ಸಾಧ್ಯವಾಗಿದೆ. ಕೆಲವು ಮುಂದುವರಿದ ದೇಶಗಳಲ್ಲಿ ಶೇ 20ರಷ್ಟು ಲಸಿಕೆ ನೀಡುವ ಸಾಧನೆಯೂ ಆಗಿಲ್ಲ ಎಂದು ವಿಶ್ಲೇಷಿಸಿದರು.
ಜನರು ನರೇಂದ್ರ ಮೋದಿಯವರ ನಾಯಕತ್ವ ಮತ್ತು ಜನಪರ ಕಾರ್ಯಕ್ರಮಗಳ ಬಗ್ಗೆ ನಂಬಿಕೆ, ವಿಶ್ವಾಸ ಮತ್ತು ಭರವಸೆ ಹೊಂದಿರುವುದರ ಸಂಕೇತ ಇದಾಗಿದೆ. ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯಡಿ ನಮ್ಮದೇ ಲಸಿಕೆಯನ್ನು ನಮ್ಮ ಜನರಿಗೆ ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಅರ್ಹ 90 ಕೋಟಿ ಜನರ ಪೈಕಿ 70 ಕೋಟಿ ಜನರಿಗೆ ಈಗಾಗಲೇ ಮೊದಲನೇ ಲಸಿಕೆ ಕೊಡಲಾಗಿದೆ. ಸುಮಾರು 30 ಕೋಟಿ ಜನರಿಗೆ ಎರಡೂ ಲಸಿಕೆ ಕೊಡಲಾಗಿದೆ. 34,515 ಕೋಟಿ ರೂಪಾಯಿ ಒಟ್ಟು ವೆಚ್ಚವಾಗಿದೆ ಎಂದು ತಿಳಿಸಿದರು.
ದೀನದಲಿತರು, ವಂಚಿತರಿಗೆ ಮೊದಲ ಆದ್ಯತೆ ನೀಡಲಾಗಿದೆ. ಎಲ್ಲ ಜನರಿಗೆ ಯಾವುದೇ ತಾರತಮ್ಯವಿಲ್ಲದೆ ಲಸಿಕೆ ಕೊಡಲಾಗಿದೆ. ಸಮಾನತೆಯ ಸಂದೇಶ ಈ ಮೂಲಕ ಕೊಟ್ಟಿದ್ದೇವೆ. ವೈದ್ಯರು, ನರ್ಸ್‍ಗಳು, ಅರೆ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಪ್ರಯತ್ನದಿಂದ ಇದು ಸಾಧ್ಯವಾಗಿದೆ ಎಂದರು.

2021ರ ಜನವರಿ 16ರಂದು ಪ್ರಧಾನಿಯವರು ಲಸಿಕೆ ಬಿಡುಗಡೆ ಮಾಡಿದರು, ಆರಂಭದಲ್ಲಿ ಆರೋಗ್ಯ ಕ್ಷೇತ್ರದ ಕಾರ್ಯಕರ್ತರಿಗೆ ಲಸಿಕೆ ಕೊಡಲಾಯಿತು. ನಂತರ ಮುಂಚೂಣಿ ಕಾರ್ಯಕರ್ತರು, ಮಾರ್ಚ್‍ನಲ್ಲಿ 60ರಿಂದ ಮೇಲ್ಪಟ್ಟ ವಯಸ್ಕರಿಗೆ, ಏಪ್ರಿಲ್‍ನಿಂದ 45 ವರ್ಷಕ್ಕೂ ಹೆಚ್ಚು ವಯಸ್ಸಿನವರಿಗೆ, ಮೂರನೇ ಹಂತದಲ್ಲಿ ಮೇ 2021ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಕೊಡಲಾಯಿತು ಎಂದ ಅವರು, ಜನವರಿ 2021ರಲ್ಲಿ 2.15 ಕೋಟಿ ಲಸಿಕೆ ನೀಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ 23.51 ಕೋಟಿ, ಅಕ್ಟೋಬರ್ ತಿಂಗಳ ಈವರೆಗೆ ಸುಮಾರು 26.61 ಕೋಟಿ ಲಸಿಕೆ ಕೊಡಲಾಗಿದೆ. ಮುಂದಿನ ತಿಂಗಳು ಇನ್ನೂ ಹೆಚ್ಚು ಲಸಿಕೆ ಕೊಡಲಾಗುವುದು ಎಂದರು. ಎಲ್ಲಿಯೂ ಲಸಿಕೆ ಕೊರತೆ ಇಲ್ಲ ಎಂದು ತಿಳಿಸಿದರು.
ಮಾಸ್ಕ್, ವೆಂಟಿಲೇಟರ್, ಆಮ್ಲಜನಕ, ಬೆಡ್‍ಗಳು ಸೇರಿದಂತೆ ಅನೇಕ ಸವಾಲುಗಳು ದೇಶದ ಮುಂದಿದ್ದವು. ಈ ಸವಾಲುಗಳಿಗೆ ಯಶಸ್ವಿಯಾಗಿ ದೇಶವು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪಂದಿಸಿದೆ. ಈಗ ಲಸಿಕೆಯನ್ನು ವಿಶ್ವದ ಇತರ ದೇಶಗಳಿಗೂ ಸರಬರಾಜು ಮಾಡಲಾಗುತ್ತಿದೆ ಎಂದರು.
ಇತರ ದೇಶಗಳಿಗೆ ಹೋಲಿಸಿದರೆ ವಿಶ್ವದಲ್ಲೇ ಕನಿಷ್ಠ ಸೋಂಕಿತರು, ಅತ್ಯಂತ ಕಡಿಮೆ ಸಾವಿನ ಪ್ರಮಾಣ ನಮ್ಮ ದೇಶದ್ದಾಗಿತ್ತು ಎಂದು ವಿವರಿಸಿದರು. ಭರವಸೆಯ ನಾಡು ನಮ್ಮದು, ಭಾರತ ಭರವಸೆಯ ದೇಶ ಎಂಬುದು ಇದರಿಂದ ಸಾಬೀತಾಗಿದೆ. ವಿಶ್ವಗುರುವಾಗುವತ್ತ ನಮ್ಮ ದೇಶ ಮುನ್ನಡೆಯುತ್ತಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಋಣಾತ್ಮಕ ಹೇಳಿಕೆ ನೀಡುವ ಮೂಲಕ ಏನು ತಿಳಿಸಲು ಹೊರಟಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಲಸಿಕೆ ಸಾಧನೆ ಬಗ್ಗೆ ವಿದೇಶಗಳ ನಾಯಕರೇ ಹೊಗಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಆರಂಭದ ದಿನಗಳಲ್ಲಿ ಲಸಿಕೆ ವಿರುದ್ಧ ಪ್ರಚಾರ ಮಾಡಿದ್ದರು ಎಂದು ನೆನಪಿಸಿದರು. ವಿಶ್ವವೇ ಬೆರಗಾಗುವ ಮಾದರಿಯಲ್ಲಿ 100 ಕೋಟಿ ಲಸಿಕೆ ನೀಡಿದ್ದು ಅಸಾಧಾರಣ ಸಾಧನೆ. ಅದನ್ನು ನಾವೀಗ ಆಚರಿಸುತ್ತಿದ್ದೇವೆ ಎಂದರು. ಸಿದ್ದರಾಮಯ್ಯ ಅವರು ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.
ಮಳೆ ನಿಂತ ಕೂಡಲೇ ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವುದು, ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. 3 ಜನ ವೈದ್ಯರು ಮತ್ತು ಇಬ್ಬರು ಪೌರಕಾರ್ಮಿಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು