ಸೋಮವಾರ, ಮೇ 20, 2024
ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

100 ಯೂನಿಟ್‌ ವಿದ್ಯುತ್‌ ಉಚಿತ, 500 ರೂ.ಗೆ ಗ್ಯಾಸ್‌ ಸಿಲಿಂಡರ್‌- ಮಧ್ಯ ಪ್ರದೇಶದಲ್ಲಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Twitter
Facebook
LinkedIn
WhatsApp
kamalnath

ಭೋಪಾಲ್‌: ಕರ್ನಾಟಕ ರಾಜ್ಯದಲ್ಲಿ 200 ಯೂನಿಟ್‌ ವಿದ್ಯುತ್‌ ಉಚಿತ, ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ, ಮನೆಯೊಡತಿಗೆ 2,000 ರೂ. ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಹಾಗೂ ಯುವನಿಧಿ ಕಾರ್ಯಕ್ರಮದ ಅಡಿಯಲ್ಲಿ ಎರಡು ವರ್ಷಗಳವರೆಗೆ ನಿರುದ್ಯೋಗ ಭತ್ಯೆ – ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ 1,500 ರೂ. ಗ್ಯಾರಂಟಿಗಳನ್ನ ಘೋಷಣೆ ಮಾಡಿರುವ ರಾಷ್ಟ್ರೀಯ ಕಾಂಗ್ರೆಸ್‌ ಇದೀಗ ಮಧ್ಯ ಪ್ರದೇಶದಲ್ಲಿಯೂ ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ.

ಇದೇ ವರ್ಷ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿಯೂ ಜಯಭೇರಿ ಬಾರಿಸಲು ಎದುರು ನೋಡುತ್ತಿದೆ. ಈ ಹಿನ್ನೆಲೆಯಲ್ಲಿ 500 ರೂ.ಗಳಿಗೆ ಎಲ್‌ಪಿಜಿ, ಕೃಷಿ ಸಾಲ ಮನ್ನಾ ಸೇರಿದಂತೆ ಅಲ್ಲಿಯೂ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. 

5 ಗ್ಯಾರಂಟಿಗಳು ಯಾವುವು?
500 ರೂ.ಗೆ ಗ್ಯಾಸ್‌ ಸಿಲಿಂಡರ್‌, ಪ್ರತಿ ಮಹಿಳೆಗೆ 1,500 ರೂ., 100 ಯೂನಿಟ್‌ ವಿದ್ಯುತ್‌ ಉಚಿತ, 200 ಯೂನಿಟ್‌ ಬಿಲ್‌ ಬಂದ್ರೆ ಅರ್ಧ ಹಣ ಕಟ್ಟಬೇಕು. ಕೃಷಿ ಸಾಲ ಮನ್ನಾ ಮಾಡಲಾಗುವುದು ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದೆ.

ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜೂನ್ 12 ರಂದು ನರ್ಮದಾ ನದಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ಜಬಲ್ಪುರದಲ್ಲಿ ರೋಡ್ ಶೋ ಮತ್ತು ರ‍್ಯಾಲಿಯೊಂದಿಗೆ ಮಧ್ಯಪ್ರದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರ ಪ್ರಾರಂಭಿಸಲಿದ್ದಾರೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ರಾಜ್ಯಸಭಾ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ