ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ
ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಥಾಣೆಯಲ್ಲಿ ನಡೆದಿದೆ. 63 ಬಾಲಕಿಯರು ಸೇರಿದಂತೆ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಥಾಣೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ ಸಂತ ಗಡ್ಗೆ ಮಹಾರಾಜ್ ಪ್ರಾಥಮಿಕ ಮತ್ತು ಮಾಧ್ಯಮಿಕ ಆಶ್ರಮ ಶಾಲೆ (ಬುಡಕಟ್ಟು ಮಕ್ಕಳ ವಸತಿ ಶಾಲೆಗಳು), ಮುಂಬೈನ ಹೊರವಲಯದಲ್ಲಿರುವ ಶಹಾಪುರ ತಾಲೂಕಿನ ಭಟ್ಸಾಯಿಯಲ್ಲಿದೆ. ಶಾಲೆಯಲ್ಲಿ 1 ರಿಂದ 10 ನೇ ತರಗತಿಯ 200 ವಿದ್ಯಾರ್ಥಿಗಳು ಇದ್ದಾರೆ.
ನಾಲ್ವರು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲರನ್ನೂ ಚಿಕಿತ್ಸೆ ನಂತರ ಶಹಾಪುರದ ಉಪವಿಭಾಗದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಶಹಾಪುರ ತಹಸೀಲ್ದಾರ್ ಕೋಮಲ್ ಠಾಕೂರ್ ಪಿಟಿಐಗೆ ತಿಳಿಸಿದ್ದಾರೆ.
ಮಧ್ಯಾಹ್ನದ ಊಟಕ್ಕಾಗಿ ವಿದ್ಯಾರ್ಥಿಗಳಿಗೆ ಆಹಾರ (ಪಲಾವ್) ಮತ್ತು ಸಿಹಿ ಖಾದ್ಯವನ್ನು (ಗುಲಾಬ್ ಜಾಮೂನ್) ನೀಡಲಾಗಿತ್ತು, 109 ಜನರಲ್ಲಿ 63 ಹುಡುಗಿಯರು ಮತ್ತು 46 ಹುಡುಗರು ವಾಂತಿ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರು ಹೇಳಿದರು.
ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸ್ಥಿತಿಗತಿ ವಿಚಾರಿಸಿದರು. ಪೀಡಿತ ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಸಹ ವೈದ್ಯಕೀಯ ಸೌಲಭ್ಯದ ಹೊರಗೆ ಜಮಾಯಿಸಿದರು, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರನ್ನು ನಿಯೋಜಿಸಲಾಗಿದೆ.
ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಠಾಕೂರ್ ಹೇಳಿದರು. ಪಲಾವ್ ಮತ್ತು ಗುಲಾಬ್ ಜಾಮೂನ್ ಎಲ್ಲಿಂದ ತಂದಿದ್ದಾರೆ ಎಂಬುದು ತಿಳಿದಿಲ್ಲ. ಘಟನೆಯ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಮಧ್ಯಪ್ರದೇಶ: ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಪೋಷಕರ ಹಣೆಗೆ ಗನ್ ಇಟ್ಟು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಭನ್ವಾರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಆದರೆ ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಬಾಲಕಿಯ ಕುಟುಂಬವು ಒಂದು ತಿಂಗಳ ಹಿಂದೆಯಷ್ಟೇ ಆ ಪ್ರದೇಶಕ್ಕೆ ತೆರಳಿತ್ತು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತ್ತೊಂದು ಘಟನೆ ಹಣೆಗೆ ಬಂದೂಕಿಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಹಣೆಗೆ ಬಂದೂಕಿಟ್ಟು ಅತ್ಯಾಚಾರ ಮಾಡಿರುವ ಘಟನೆ ಸಹರಾನ್ಪುರದಲ್ಲಿ ನಡೆದಿತ್ತು. ಮದುವೆಯ ನೆಪದಲ್ಲಿ ಕರೆದೊಯ್ದು ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆ ಮತ್ತು ಅವರ ಸಹೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ತನ್ನನ್ನು ಬೇರೆ ಬೇರೆ ಹೋಟೆಲ್‌ಗಳಿಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ ನಂತರ ಗರ್ಭಿಣಿಯಾಗಿದ್ದಳು ಎಂದು ಅವರು ಆರೋಪಿಸಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ ಎಂದು ಮಹಿಳೆ ಆರೋಪಿಸಿದ್ದಾರೆ.
ಆರೋಪಿ ಮತ್ತು ಆತನ ಸಹೋದರ ಇಬ್ಬರೂ ಬಂದೂಕು ತೋರಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.