ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

12ನೇ ತರಗತಿಯಲ್ಲಿ ವಧುವಿಗೆ ಕಡಿಮೆ ಮಾರ್ಕ್ಸ್‌ – ಮದುವೆ ರದ್ದು ಮಾಡಿದ ವರ

Twitter
Facebook
LinkedIn
WhatsApp
WhatsApp Image 2023 03 14 at 9.54.47 AM 3

ಲಕ್ನೋ: ವಧುವೊಬ್ಬಳು (Bride) 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ (Groom) ಮದುವೆಯಾಗಲು ನಿರಾಕರಿಸಿದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಉತ್ತರಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ವಧುವಿನ ಕುಟುಂಬಸ್ಥರು ವರದಕ್ಷಿಣೆ (Dowry) ಬೇಡಿಕೆ ಈಡೇರಿಸದ ಕಾರಣ ವರನ ಕುಟುಂಬವು ಮದುವೆಯನ್ನು ರದ್ದುಗೊಳಿಸಿದೆ ಎಂದು ಆರೋಪಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದೆ.

ಆದರೆ 12ನೇ ತರಗತಿ ಅಂಕಪಟ್ಟಿಯಲ್ಲಿ ಬಾಲಕಿಗೆ ಕಡಿಮೆ ಅಂಕ ಬಂದಿದೆ. ಇದರಿಂದಾಗಿ ಮದುವೆಯನ್ನು ರದ್ದು ಮಾಡಲಾಗಿದೆ ಎಂದು ವರನ ಕಡೆಯವರು ತಿಳಿಸಿದ್ದಾರೆ.

ಬಾಗನವಾ ಗ್ರಾಮದ ರಾಮಶಂಕರ್ ಎಂಬುವವರ ಪುತ್ರ ಸೋನು ಎಂಬಾತನೊಂದಿಗೆ ಸೋನಿ ಎಂಬಾಕೆಯ ಮದುವೆಯನ್ನು ನಿಶ್ಚಯಿಸಲಾಗಿತ್ತು. ವಧುವಿನ ಕುಟುಂಬಸ್ಥರು 60 ಸಾವಿರಕ್ಕೂ ಅಧಿಕ ಹಣ ಖರ್ಚು ಮಾಡಿ ವರನಿಗೆ 15 ಸಾವಿರ ಮೌಲ್ಯದ ಬಂಗಾರದ ಉಂಗುರ ಕೂಡ ನೀಡಿ ಮದುವೆ ಸಮಾರಂಭ ಏರ್ಪಡಿಸಿದ್ದರು.

ಮರುದಿನವೇ ವರನ ಮನೆಯವರು ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ವಧುವಿನ ತಂದೆ ಹೆಚ್ಚಿನ ವರದಕ್ಷಿಣೆ ನೀಡಲು ಆಗದಿದ್ದರಿಂದ ವರನ ಕುಟುಂಬವು ಹುಡುಗಿಗೆ 12ನೇ ತರಗತಿಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮದುವೆಯನ್ನು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ವಧುವಿನ ಕುಟುಂಬವು ತಮ್ಮ ಸಂಬಂಧಿಕರ ಮೂಲಕ ವರನ ಕುಟುಂಬವನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ವರನ ಕುಟುಂಬವು ವರದಕ್ಷಿಣೆ ನೀಡುವಂತೆ ಪಟ್ಟು ಹಿಡಿದರು. ಇದರಿಂದಾಗಿ ವಧುವಿನ ತಂದೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ