ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

12 ವರ್ಷಗಳ ಬಳಿಕ ಕೋಡಿ ಬಿದ್ದ ಬೃಹತ್ ಕೆರೆ – ರೈತರ ಮೊಗದಲ್ಲಿ ಮಂದಹಾಸ

Twitter
Facebook
LinkedIn
WhatsApp
12 ವರ್ಷಗಳ ಬಳಿಕ ಕೋಡಿ ಬಿದ್ದ ಬೃಹತ್ ಕೆರೆ – ರೈತರ ಮೊಗದಲ್ಲಿ ಮಂದಹಾಸ

ಚಿಕ್ಕಮಗಳೂರು: ಜಿಲ್ಲೆಯ ಅಪ್ಪಟ ಬಯಲುಸೀಮೆ ಭಾಗವಾದ ಕಡೂರು ತಾಲೂಕಿನ ದೇವನೂರು ಗ್ರಾಮದ ಕೆರೆ 12 ವರ್ಷಗಳ ಬಳಿಕ ಕೋಡಿ ಬಿದ್ದಿದ್ದು ದೇವನೂರು ಹಾಗೂ ಸುತ್ತಮುತ್ತಲಿನ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅಜ್ಜಂಪುರ ಹಾಗೂ ಕಡೂರು ಭಾಗದಲ್ಲೇ ಯತೇಚ್ಛವಾಗಿ ಮಳೆ ಸುರಿದಿದ್ದು ಕೆರೆ-ಕಟ್ಟೆ-ಹಳ್ಳ-ಕೊಳ್ಳಗಳು ಕೋಡಿ ಬಿದ್ದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಡೂರು ತಾಲೂಕಿನ ದೇವನೂರು ಗ್ರಾಮದ ದೇವನೂರು ಕೆರೆ ಸುಮಾರು 350 ಎಕರೆಗೂ ಅಧಿಕ ಪ್ರದೇಶದಲ್ಲಿ ವಿಸ್ತಾರವಾಗಿದೆ. ಈ ಕೆರೆ ತುಂಬಿದರೆ ನಾಲ್ಕೈದು ವರ್ಷಗಳ ಕಾಲ ಈ ಭಾಗದ ಜನಸಾಮಾನ್ಯರು ಹಾಗೂ ದನಕರುಗಳಿಗೆ ಕುಡಿಯೋ ನೀರಿಗೆ ಯಾವುದೇ ತೊಂದರೆಯಾಗುವುದಿಲ್ಲ. 

ಈ ಕೆರೆ ಕೋಡಿ ಬೀಳದೇ ಸುಮಾರು 12 ವರ್ಷಗಳೇ ಕಳೆದಿತ್ತು. ಕೆರೆಯ ತುಂಬಾ ಗಿಡಘಂಟೆಗಳು ಬೆಳೆದಿದ್ದವು. ಆದರೆ, ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆರೆ ತುಂಬಿ ಸಮುದ್ರದಂತೆ ಕೋಡಿ ಬೀಳುತ್ತಿದೆ. ಈ ದೃಶ್ಯವನ್ನು ಸ್ಥಳಿಯರು ಕಣ್ತುಂಬಿಕೊಳ್ಳುತ್ತಿದ್ದಾರೆ. ಆದರೆ, ಕೋಡಿ ಬಿದ್ದ ನೀರು ಎಲ್ಲೆಂದರಲ್ಲಿ ನುಗ್ಗುತ್ತಿರುವ ಪರಿಣಾಮ ಹೊಲ-ಗದ್ದೆ-ತೋಟಗಳು ಕೂಡ ಜಲಾವೃತಗೊಳ್ಳುತ್ತಿವೆ. ತೋಟಗಳಲ್ಲಿ ಎರಡ್ಮೂರು ಅಡಿ ನೀರು ನಿಲ್ಲುತ್ತಿದೆ. ಭತ್ತ, ಹತ್ತಿ, ಈರುಳ್ಳಿ ಎಲ್ಲಾ ಬೆಳೆಗಳು ನೀರಲ್ಲಿ ಕೊಚ್ಚಿ ಹೋಗಿ ಮಣ್ಣು ಪಾಲಾಗಿದೆ. 

 

ಈಗ ಅಡಿಕೆಯನ್ನು ಕೊಯ್ಯುವ ಕಾಲ. ಈಗ ಹೀಗೆ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಅಡಿಕೆ ತೋಟದಲ್ಲೂ ನೀರು ನಿಲ್ಲುತ್ತಿದ್ದು ಶೀತಕ್ಕೆ ಅಡಿಕೆ ಕಾಯಿಗಳೂ ಉದುರುತ್ತಿವೆ. ಮರದಲ್ಲಿರುವ ಕಾಯಿಗಳನ್ನು ಕೊಯ್ಯಲು ಸಾಧ್ಯವಾಗುತ್ತಿಲ್ಲ. ಭಾರೀ ಮಳೆಯಿಂದ ಅಡಿಕೆ ತೋಟಗಳು ಜಲಾವೃತಗೊಂಡು ಬೆಳೆಗಾರರು ಕಂಗಾಲಾಗಿದ್ದಾರೆ. ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಯಿಂದ ರೈತರಿಗೆ ಒಂದೆಡೆ ಖುಷಿ ತಂದಿದೆ, ಮತ್ತೊಂದೆಡೆ ಆತಂಕ ತಂದಿದೆ. ತೋಟಗಳನ್ನೇ ನೆಚ್ಚಿಕೊಂಡು ಬದುಕುತ್ತಿದ್ದ ಸಣ್ಣ ಬೆಳೆಗಾರರು ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ