ಗಂಗಾವತಿ (ಜೂ.14): ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಕ್ಷೇತ್ರವನ್ನು .120 ಕೋಟಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದಕ್ಕಾಗಿ 60 ಎಕರೆ ಭೂಸ್ವಾಧೀನ ಪಡಿಸಿಕೊಳ್ಳಲಾಗುತ್ತದೆ. ಇದರ ವ್ಯಾಪ್ತಿಯಲ್ಲಿ 28 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ. ಸೋಮವಾರ ಅಂಜನಾದ್ರಿಗೆ ಭೇಟಿ ನೀಡಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಕುರಿತು ಚರ್ಚಿಸಲು ಜೂ.15ರಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಈ ದೇವಸ್ಥಾನ ಬರುವುದರಿಂದ ಅದರ ಅಡಿ ಕಾನೂನು ಪಾಲಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.
ಒಟ್ಟು 28 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಪ್ರಮುಖವಾಗಿ ಯಾತ್ರಿ ನಿವಾಸ, 600 ಕೊಠಡಿಗಳ ನಿರ್ಮಾಣ, ತಂಗುದಾಣ, ಸಿಬ್ಬಂದಿಗೆ 20 ಕೊಠಡಿಗಳ ನಿರ್ಮಾಣ, ಸಮುದಾಯ ಭವನ, ವಸತಿಗೃಹ, ಭೋಜನ ಶಾಲೆ, ದೇವಾಲಯ ನವೀಕರಣ, ರಸ್ತೆ ಅಗಲೀಕರಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. ಇದೊಂದು ಪ್ರೇಕ್ಷಣೀಯ ಸ್ಥಳದ ಜತೆಗೆ ರಾಮಾಯಣ, ಅಂಜನಾದ್ರಿ ಬಗ್ಗೆ ತಿಳಿಹೇಳುವ ಇತಿಹಾಸ ಸೃಷ್ಟಿಸಲಾಗುತ್ತದೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?