ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ

Twitter
Facebook
LinkedIn
WhatsApp
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ;

13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ,  ಬಿಜೆಪಿ 2 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ನವದೆಹಲಿ: ಏಳು ರಾಜ್ಯಗಳಾದ್ಯಂತ ಶನಿವಾರ ನಡೆದ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ (Assembly Bypoll results) ಮತ ಎಣಿಕೆಯಾಗಿ ಫಲಿತಾಂಶ ಪ್ರಕಟವಾದಾಗ INDIA ಮೈತ್ರಿಕೂಟ 10 ಸ್ಥಾನಗಳನ್ನು ಗಳಿಸಿದೆ. ಅದೇ ವೇಳೆ ಬಿಜೆಪಿ (BJP) ಎರಡು ಕ್ಷೇತ್ರಗಳಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿಯೊಬ್ಬರು ಒಂದು ಕ್ಷೇತ್ರ ಗೆದ್ದುಕೊಂಡಿದ್ದಾರೆ. ಜುಲೈ 10 ರಂದು ಚುನಾವಣೆ ನಡೆದ ವಿಧಾನಸಭಾ ಕ್ಷೇತ್ರಗಳಲ್ಲಿ, ಹಿಮಾಚಲ ಪ್ರದೇಶದ ಡೆಹ್ರಾ ಮತ್ತು ನಲಗಢ್ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತು. ಹಮೀರ್‌ಪುರದಲ್ಲಿ ಬಿಜೆಪಿ ಗೆದ್ದು ಬೀಗಿದೆ.

ಪಶ್ಚಿಮ ಬಂಗಾಳದ 4, ಹಿಮಾಚಲ ಪ್ರದೇಶದ 3, ಉತ್ತರಾಖಂಡ್ ನ 2 ಹಾಗೂ ಪಂಜಾಬ್, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ INDIA ಮೈತ್ರಿಕೂಟದ ಕಾಂಗ್ರೆಸ್, ಟಿಎಂಸಿ, ಎಎಪಿ, ಡಿಎಂಕೆ ಅಭ್ಯರ್ಥಿಗಳು ಕಣದಲ್ಲಿದ್ದರು.

ಪಂಜಾಬ್ ನ ಜಲಂಧರ್ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಎಎಪಿಯ ಮೊಹಿಂದರ್ ಭಗತ್ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶೀತಲ್ ಅಂಗುರಲ್ ಅವರನ್ನು 37, 325 ಮತಗಳ ಅಂತರದಿಂದ ಸೋಲಿಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಇದು ತಮ್ಮ ಸರ್ಕಾರದ ಕೆಲಸಗಳು ರಾಜ್ಯದ ಜನರಿಗೆ ಖುಷಿ ನೀಡಿವೆ ಎಂಬುದನ್ನು ತೋರಿಸುತ್ತದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.

ತಮಿಳುನಾಡಿನ ವಿಕ್ರವಂದಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಡಿಎಂಕೆ ಅಭ್ಯರ್ಥಿ ಅನ್ನಿಯುರ್ ಶಿವ ತನ್ನ ಸಮೀಪದ ಎನ್ ಡಿಎ ಅಭ್ಯರ್ಥಿ ಸಿ. ಅಂಬುಮಣಿ ಅವರನ್ನು 67, 757 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಇನ್ನೂ ಪಶ್ಚಿಮ ಬಂಗಾಳದ ರಾಯಗಂಜ್ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಕೃಷ್ಣ ಕಲ್ಯಾಣಿ ಅವರು 50,077 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಾನಸ ಕುಮಾರ್ ಘೋಷ್ ಅವರನ್ನು ಮಣಿಸಿದ್ದಾರೆ. ರಣಘಾಟ್ ದಕ್ಷಿಣ ಕ್ಷೇತ್ರದಲ್ಲಿ ಟಿಎಂಸಿಯ ಮುಕುತ್ ನಮಿ ಅಧಿಕಾರಿ ಅವರು ಬಿಜೆಪಿಯ ಮನೋಜ್ ಕುಮಾರ್ ಬಿಸ್ವಾಸ್ ಅವರನ್ನು 74,485 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಬಾಗ್ದಾ ಕ್ಷೇತ್ರದಲ್ಲಿ ಟಿಎಂಸಿಯ ಮಧುಪರ್ಣಾ ಠಾಕೂರ್ ಅವರು ಬಿಜೆಪಿಯ ಬಿನಯ್ ಕುಮಾರ್ ಬಿಸ್ವಾಸ್ ಅವರನ್ನು 74, 251 ಮತಗಳ ಅಂತರದಿಂದ ಸೋಲಿಸಿ ಗೆದ್ದು ಬೀಗಿದ್ದಾರೆ . ಸುಪ್ತಿ ಪಾಂಡೆ ಬಿಜೆಪಿಯ ಕಲ್ಯಾಣ್ ಚುಬೆ ಅವರನ್ನು 62,312 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಹಿಮಾಚಲ ಪ್ರದೇಶದ ದೆಹ್ರಾ ಕ್ಷೇತ್ರದಲ್ಲಿ ಸಿಎಂ ಸುಖ್ವಿಂದರ್ ಸಿಂಗ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಅವರು ಬಿಜೆಪಿಯ ಹೊಶಿಯಲ್ ಸಿಂಗ್ ಅವರನ್ನು 9, 399 ಮತಗಳ ಅಂತರದಿಂದ ಸೋಲಿಸಿದ್ದಾರೆ. ನಾಲಗಢದಲ್ಲಿ ಕಾಂಗ್ರೆಸ್ ನ ಹರ್ದೀಪ್ ಸಿಂಗ್ ಬಾವಾ ಅವರು ಬಿಜೆಪಿಯ ಕೆ ಎಲ್ ಠಾಕೂರ್ ವಿರುದ್ಧ 25,618 ಮತಗಳಿಂದ ಜಯಗಳಿಸಿದ್ದಾರೆ. ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಹೇಳಲಾಗಿದೆ.

ಉತ್ತರಾಖಂಡದಲ್ಲಿ ಬದರಿನಾಥ್ ಮತ್ತು ಮಂಗಳೌರ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳಾದ ಲಖಪತ್ ಸಿಂಗ್ ಬುಟೋಲಾ ಮತ್ತು ಖಾಜಿ ಮೊಹಮ್ಮದ್ ನಿಜಾಮುದ್ದೀನ್ ಗೆಲುವು ಸಾಧಿಸಿದ್ದಾರೆ. ಬೂಟೋಲಾ ಅವರು ಬಿಜೆಪಿಯ ರಾಜೇಂದ್ರ ಸಿಂಗ್ ಭಂಡಾರಿ ಅವರನ್ನು 5,224 ಮತಗಳಿಂದ ಸೋಲಿಸಿದ್ದರೆ, ನಿಜಾಮುದ್ದೀನ್ ಅವರು ಬಿಜೆಪಿಯ ಕರ್ತಾರ್ ಸಿಂಗ್ ಭದಾನ ಅವರನ್ನು 422 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದಾರೆ.

ಮಧ್ಯಪ್ರದೇಶದ ಅಮರವಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ್ ಪ್ರತಾಪ್ ಶಾ ಅವರು ಕಾಂಗ್ರೆಸ್‌ನ ಧೀರನ್ ಸಾಹ್ ಇನ್ವಾಟಿ ವಿರುದ್ಧ 3,027 ಮತಗಳ ಅಂತರದಿಂದ ಜಯಗಳಿಸಿದರೆ, ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶಂಕರ್ ಸಿಂಗ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ಅವರನ್ನು 8,246 ಮತಗಳ ಅಂತರದಿಂದ ಸೋಲಿಸಿ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

ಉಪಚುನಾವಣೆಯಲ್ಲಿ INDIA ಮೈತ್ರಿಕೂಟದ ಗೆಲುವಿಗೆ ರಾಹುಲ್ ಗಾಂಧಿ ಶ್ಲಾಘನೆ

ವಿಧಾನಸಭಾ ಉಪಚುನಾವಣೆಯಲ್ಲಿ INDIA ಮೈತ್ರಿಕೂಟ ಪಕ್ಷಗಳ ಅದ್ಭುತ ವಿಜಯವನ್ನು ಕಾಂಗ್ರೆಸ್ ನಾಯಕರು ಶನಿವಾರ ಶ್ಲಾಘಿಸಿದ್ದಾರೆ, ಬಿಜೆಪಿಯ ನೀರಸ ಪ್ರದರ್ಶನಕ್ಕೆ ಅದರ “ದುರಹಂಕಾರ, ದುರಾಡಳಿತ ಮತ್ತು ನಕಾರಾತ್ಮಕ ರಾಜಕೀಯ” ಕಾರಣವೆಂದು ಹೇಳಿದ್ದಾರೆ. ಉಪಚುನಾವಣೆ ಫಲಿತಾಂಶಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಕೀಯ ವಿಶ್ವಾಸಾರ್ಹತೆ ಕುಸಿಯುತ್ತಿರುವುದಕ್ಕೆ ಬಲವಾದ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದ್ದಾರೆ. ಭಾರತದ ಚುನಾವಣಾ ಆಯೋಗದ ಪ್ರಕಾರ, ಏಳು ರಾಜ್ಯಗಳ 13 ಸ್ಥಾನಗಳಿಗೆ ಈ ವಾರದ ಆರಂಭದಲ್ಲಿ ನಡೆದ ಉಪಚುನಾವಣೆಗಳಿಗೆ ಶನಿವಾರ ಮತಗಳನ್ನು ಎಣಿಸಿದಾಗ, INDIA ಮೈತ್ರಿಕೂಟ ಪಕ್ಷಗಳು 10 ವಿಧಾನಸಭಾ ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಎರಡು ಮತ್ತು ಸ್ವತಂತ್ರ ಒಂದನ್ನು ಗೆದ್ದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist