ಬುಧವಾರ, ಏಪ್ರಿಲ್ 24, 2024
Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಡ್ಡೆಗಳ ಮೈಬಿಸಿ ಹೆಚ್ಚಿಸುವ ‘ಪೆಂಟಗನ್’ ಚಿತ್ರದ ವಿಡಿಯೋ ಸಾಂಗ್

Twitter
Facebook
LinkedIn
WhatsApp
WhatsApp Image 2023 03 14 at 9.54.47 AM 2

ದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ‘ಪೆಂಟಗನ್’ (Pentagon) ಸಿನಿಮಾದ 5 ನೇ ಕಥೆಯ ಟೀಸರ್ ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡಿದ್ದು, ಸಾಕಷ್ಟು ಚರ್ಚೆ  ಕೂಡ ಆಗಿದೆ. ಇದೀಗ ಈ ಚಿದ್ರದಲ್ಲಿನ ಮೂರನೇ ಕಥೆಯ ‘ಕಾಮನಬಿಲ್ಲು ಮೂಡುತಿದೆ ‘ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ.

ಬಿಸಿಬಿಸಿ ಚರ್ಚೆ ಹುಟ್ಟಾಕುತ್ತಿದೆ 'ಪೆಂಟಗಾನ್' ಸಿನಿಮಾದ ಬೋಲ್ಡ್ ಸಾಂಗ್ | Kannada  Anthology Movie: Pentagon, 3rd Chapter Song Kamanabillu Moodide released -  Kannada Filmibeat

ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಕಥೆಯಿದು. ರಾಘು ಶಿವಮೊಗ್ಗ (Raghu Shivamogga) ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಪ್ರಕಾಶ್ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ,ಸಾಗರ್,ರಾಕೇಶ ಇನ್ನು ಹಲವರು ಕಾಣಿಸಿಕೊಂಡಿದ್ದಾರೆ. 

ಈ ಅಧ್ಯಾಯಕ್ಕೆ ಕಿರಣ್ ಹಂಪಾಪುರ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಸಾಹಿತ್ಯ ನಾಗಾರ್ಜುನ ಶರ್ಮಾ, ಸಂಕಲನ ವೆಂಕಟೇಶ ಯುಡಿವಿ, ಸಂತೋಷ ವೆಂಕಿ ಮತ್ತು ಇಂಚರ ರಾವ್ ಅವರ ಕಂಠದಲ್ಲಿ ಹಾಡು ಮೂಡಿ ಬಂದಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್  ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ.

Kannada Anthology Movie: Pentagon, 3rd Chapter Song Kamanabillu Moodide released

ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ (Guru Deshpande).  ಸಾಂಗ್  ರಿಲೀಸ್ ಮಾಡಿ, ಮುಂದಿನ ದಿನಗಳಲ್ಲಿ ಸಿನಿಮಾ ಬಿಡುಗಡೆಯ ದಿನಾಂಕವನ್ನು ಘೋಷಿಸಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ