14 ವರ್ಷದ ಬಾಲಕಿ ಮೇಲೆ ಸೋದರಸಂಬಂಧಿ, ಚಿಕ್ಕಪ್ಪನಿಂದಲೇ ಅತ್ಯಾಚಾರ
ಮುಂಬೈ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈನಲ್ಲಿ (Mumbai Crime) ಇಬ್ಬರನ್ನು ಬಂಧಿಸಲಾಗಿದೆ. ಆ ಬಾಲಕಿಯ ಸಂಬಂಧಿಕರೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆಯ ಚಿಕ್ಕಪ್ಪ ಹಾಗೂ ಕಸಿನ್ ಇದೀಗ ಕಂಬಿ ಎಣಿಸುತ್ತಿದ್ದಾರೆ.
14 ವರ್ಷದ ಬಾಲಕಿ ಬೊರಿವಲಿಯಲ್ಲಿರುವ ತನ್ನ ತಾಯಿಯ ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಾಗ ಆಕೆಯ ಸೋದರಸಂಬಂಧಿ ಮತ್ತು ಚಿಕ್ಕಪ್ಪನಿಂದ ಹಲವಾರು ಬಾರಿ ಅತ್ಯಾಚಾರವೆಸಗಲಾಗಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ಸಂತ್ರಸ್ತ ಬಾಲಕಿ ವಿರಾರ್‌ನಲ್ಲಿರುವ ತನ್ನ ಚಿಕ್ಕಪ್ಪನಿಗೆ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ. ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಳಿಕ, ಈ ಪ್ರಕರಣವನ್ನು ಮುಂಬೈನ MHB ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಮಾಹಿತಿ ಪಡೆದ 4 ಗಂಟೆಗಳಲ್ಲಿ 50 ವರ್ಷ ಮತ್ತು 19 ವರ್ಷ ವಯಸ್ಸಿನ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (IPC) 376, 376 (2) (n), 376 (2) (f) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.