ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
![ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ](https://urtv24.com/wp-content/uploads/2023/12/New-Project-35-1024x538.jpg)
ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ (Thailand) ಬಸ್ (Bus) ಒಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ದೇಶದ ಪಶ್ಚಿಮ ಪ್ರಾಂತ್ಯದ ಪ್ರಚುವಾಪ್ ಖಿರಿ ಖಾನ್‌ನಲ್ಲಿ ಮಧ್ಯರಾತ್ರಿ ವೇಳೆ ಭೀಕರ ಅಪಘಾತ (Accident) ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಅರ್ಧಭಾಗದಷ್ಟು ನಜ್ಜುಗುಜ್ಜಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರಕ್ಷಣಾ ಸಿಬ್ಬಂದಿ ಪ್ರಯಾಣಿಕರನ್ನು ಅವಶೇಷಗಳಿಂದ ಹೊರತೆಗೆಯುತ್ತಿರುವುದು ವೀಡಿಯೋಗಳಲ್ಲಿ ಕಂಡುಬಂದಿದೆ.
ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?
ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮಹಾ ಪ್ರಮಾದವೊಂದು ನಡೆದಿರುವ ಬಗ್ಗೆ ಸಂಶಯ ಮೂಡಿದೆ. ಗುರಿ ತಪ್ಪಿ ಬಿದ್ದ ಅದೊಂದು ಗುಂಡೇಟಿನಿಂದ ಅರ್ಜುನ (Arjuna) ಬಲ ಕಳೆದುಕೊಂಡು ಕಾದಾಡಲಾಗದೆ ಸೋಲೊಪ್ಪಿದನಾ ಎಂಬ ಪ್ರಶ್ನೆ ಮೂಡಿದೆ. ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಆಗಿರುವ ಯಡವಟ್ಟಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.
ಮದದಲ್ಲಿದ್ದ ಕಾಡಾನೆ (Elephant) ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು. ಮದದಲ್ಲಿರುವ ಕಾಡಾನೆ ಹುಚ್ಚಾನೆಯಂತೆ ವರ್ತಿಸುತ್ತದೆ ಎಂಬ ಜ್ಞಾನ ಇದ್ದರೂ ತಪ್ಪು ನಿರ್ಧಾರ ತೆಗೆದುಕೊಂಡರು ಎಂದು ತಜ್ಞರು ಟೀಕಿಸುತ್ತಿದ್ದಾರೆ. ಕಾಡಾನೆ ಸೆರೆಗೆ ತೆರಳಿದ್ದ ವೇಳೆ ಒಂಟಿಸಲಗ ಏಕಾಏಕಿ ದಾಳಿ ಮಾಡಿತ್ತು. ಸಲಗ ದಾಳಿ ಮಾಡಿದಾಗ ಅದರಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಗುಂಡು ಹಾರಿಸಿದಾಗ ಗುರಿ ತಪ್ಪಿ ಅದು ಅರ್ಜುನನ ಕಾಲಿಗೆ ತಗುಲಿರುವ ಬಗ್ಗೆ ಅನುಮಾನ ಮೂಡಿದೆ. ಗುಂಡು ತಗುಲಿದ ಬಗ್ಗೆ ಕಾರ್ಯಾಚರಣೆ ಸ್ಥಳದಲ್ಲಿದ್ದ ಆನೆ ಮಾವುತರೊಬ್ಬರು ನೀಡಿರುವ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟಿಸಿದೆ. ಅರ್ಜುನನ ಕಾಲಿಗೆ ಗುಂಡು ತಗುಲುತ್ತಲೇ ಅದು ಬಲ ಕಳೆದುಕೊಂಡಿತ್ತು. ಈ ವೇಳೆ ಹಂತಕ ಆನೆ ಹಠಾತ್ ದಾಳಿ ಮಾಡಿತ್ತು ಎನ್ನಲಾಗಿದೆ.
ಕಾರ್ಯಾಚರಣೆ ತಂಡದಿಂದ ಆಕಸ್ಮಿಕವಾಗಿ ಮತ್ತೊಂದು ಯಡವಟ್ಟಾಗಿರುವ ಬಗ್ಗೆ ಅನುಮಾನ ಮೂಡಿದೆ. ಮಿಸ್ ಫೈರ್ ಆಗಿ ಸಾಕಾನೆಗೆ ಅರವಳಿಕೆ ಮದ್ದು ಡಾಟ್ ಆಗಿದ್ದರಿಂದ ಕಾರ್ಯಾಚರಣೆ ತಂಡ ಕೂಡ ಬಲ ಕಳೆದುಕೊಂಡು ಸಮಸ್ಯೆ ಎದುರಿಸಿದೆ. ಮದವೇರಿದ ಆನೆಗೆ ಅರವಳಿಕೆ ಚುಚ್ಚದೇ ಹೋಗಿದ್ದರಿಂದ ಅರ್ಜುನ ಬಲ ಕಳೆದುಕೊಂಡು ಬಲಿಯಾದ ಎನ್ನಲಾಗಿದೆ. ಈ ಎಲ್ಲಾ ಸಂಶಯಗಳನ್ನು ಬಗೆಹರಿಸಲು ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಎಲ್ಲೆಡೆ ಒತ್ತಾಯಿಸಲಾಗುತ್ತಿದೆ. ಕಾರ್ಯಾಚರಣೆ ವೇಳೆ ಆದ ಯಡವಟ್ಟಿನ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಹಿಸಲಾಗುತ್ತಿದೆ.