ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ತಹಶೀಲ್ದಾರ್ ಅಜಿತ್‌ ರೈ ಅಮಾನತು!

Twitter
Facebook
LinkedIn
WhatsApp
Untitled 1

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ತಂದೆಯ ಮರಣದ ಬಳಿಕ ಕಂದಾಯ ಇಲಾಖೆಯಲ್ಲಿ ಅನುಕಂಪದ ಆಧಾರದ ಮೇಲೆ ಎಫ್‌ಡಿಎ ಹುದ್ದೆ ಪಡೆದುಕೊಂಡಿದ್ದ ಅಜಿತ್‌ ಹಂತ ಹಂತವಾಗಿ ತಹಸೀಲ್ದಾರ್‌ ಹುದ್ದೆಗೇರಿದ್ದರು.

ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು.

ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು 7 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ