ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

 17 ವರ್ಷದ ಬಾಲಕಿ ಮೇಲೆ ಆಕೆಯ ಅಪ್ಪ, ಚಿಕ್ಕಪ್ಪನಿಂದಲೇ ಅತ್ಯಾಚಾರ; ಅಜ್ಜನಿಂದಲೂ ಕಿರುಕುಳ

Twitter
Facebook
LinkedIn
WhatsApp
 17 ವರ್ಷದ ಬಾಲಕಿ ಮೇಲೆ ಆಕೆಯ ಅಪ್ಪ, ಚಿಕ್ಕಪ್ಪನಿಂದಲೇ ಅತ್ಯಾಚಾರ; ಅಜ್ಜನಿಂದಲೂ ಕಿರುಕುಳ

ಪುಣೆ: 17 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ತಂದೆ ಮತ್ತು ಚಿಕ್ಕಪ್ಪನೇ ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಭೀಕರ ಘಟನೆ ಮಹಾರಾಷ್ಟ್ರದ (Maharashtra) ಪುಣೆ ಜಿಲ್ಲೆಯಲ್ಲಿ ನಡೆದಿದೆ. ಹೆತ್ತ ಮಗಳ ಮೇಲೇ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆ ಒಂದೆಡೆಯಾದರೆ, ಆ ಬಾಲಕಿಗೆ ಆಕೆಯ ಅಜ್ಜ ಕೂಡ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದು ಇನ್ನಷ್ಟು ಆಘಾತಕಾರಿ ಸಂಗತಿಯಾಗಿದೆ.

ಉತ್ತರ ಪ್ರದೇಶದ ಬಾಲಕಿ ತನ್ನ ಕಾಲೇಜಿನಲ್ಲಿ ವಿಶಾಖ ಸಮಿತಿಯ ಸದಸ್ಯರಿಗೆ ತನಗಾದ ಕಷ್ಟವನ್ನು ವಿವರಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಆ ಅಪ್ರಾಪ್ತ ಬಾಲಕಿ ಪುಣೆಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಇದೀಗ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ 17 ವರ್ಷದ ಬಾಲಕಿಗೆ ಆಕೆಯ ಅಜ್ಜ ಕೂಡ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ ನಗರ ಪೊಲೀಸರು ಬಾಲಕಿಯ ತಂದೆ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಏನಿದು ಘಟನೆ?: ಬಾಲಕಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, 2016 ಮತ್ತು 2018ರ ನಡುವೆ ಕಾಲೇಜಿಗೆ ರಜೆ ಇದ್ದಾಗ ಉತ್ತರ ಪ್ರದೇಶದಲ್ಲಿದ್ದ ತನ್ನ ಮನೆಗೆ ಹೋದಾಗಲೆಲ್ಲ ಆ ಬಾಲಕಿಯ ಮೇಲೆ ಆಕೆಯ ತಂದೆ ಮತ್ತು ಚಿಕ್ಕಪ್ಪ ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಆ ಬಾಲಕಿ ತನ್ನ ಅಜ್ಜ ಕೂಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ.

2018ರಲ್ಲಿ ಬಾಲಕಿ ತನ್ನ ತಂದೆಗೆ ತನ್ನ ಅಜ್ಜ ನೀಡುತ್ತಿರುವ ಕಿರುಕುಳದ ಬಗ್ಗೆ ಪತ್ರ ಬರೆದು ತಿಳಿಸಿದ್ದಳು. ಆದರೆ, ಆತ ಈ ಬಗ್ಗೆ ಯಾವ ಕ್ರಮವನ್ನೂ ತೆಗೆದುಕೊಳ್ಳಲಿಲ್ಲ. ಅದರ ಬದಲು ಅದಾದ ನಂತರ ಆಕೆ ಮನೆಗೆ ಹೋದಾಗಲೆಲ್ಲ ಆಕೆಯ ಅಪ್ಪನೇ ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ತಂದೆ, ಚಿಕ್ಕಪ್ಪ ಮತ್ತು ಅಜ್ಜನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist