ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

18 ಬೌಂಡರಿ, 4 ಸಿಕ್ಸರ್, 143 ರನ್; ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್ ಕೌರ್ ರೌದ್ರಾವತಾರ..!

Twitter
Facebook
LinkedIn
WhatsApp
18 ಬೌಂಡರಿ, 4 ಸಿಕ್ಸರ್, 143 ರನ್; ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್ ಕೌರ್ ರೌದ್ರಾವತಾರ..!

ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಹರ್ಮನ್ ಅವರ ಐದನೇ ಶತಕವಾಗಿದ್ದು, ಆರಂಭದಿಂದಲೂ ಅಬ್ಬರಿಸಿದ ನಾಯಕಿ 18 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 143 ರನ್ ಚಚ್ಚಿದರು.

ದಿ ಸ್ಪಿಟ್‌ಫೈರ್ ಗ್ರೌಂಡ್ ಸೇಂಟ್ ಲಾರೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ವನಿತ ತಂಡಗಳ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಹರ್ಮನ್ ಅವರ ಐದನೇ ಶತಕವಾಗಿದ್ದು, ಆರಂಭದಿಂದಲೂ ಅಬ್ಬರಿಸಿದ ನಾಯಕಿ 18 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 143 ರನ್ ಚಚ್ಚಿದರು. ಭಾಟಿಯಾ ವಿಕೆಟ್ ಬಳಿಕ ಮೈದಾನಕ್ಕಿಳಿದ ನಾಯಕಿ ಹರ್ಮನ್​ಪ್ರೀತ್ ಕೌರ್, ಮೊದಲು ಮಂಧಾನ, ಬಳಿಕ ಹರ್ಲೀನ್ ಡಿಯೋಲ್ ಜೊತೆಗಿನ ಉತ್ತಮ ಜೊತೆಯಾಟದೊಂದಿಗೆ ತಂಡವನ್ನು ಬೃಹತ್ ಸ್ಕೋರ್​ನತ್ತ ಕೊಂಡೊಯ್ದರು. ಈ ಮೂವರ ಅದ್ಭುತ ಇನ್ನಿಂಗ್ಸ್​ನ ಆಧಾರದ ಮೇಲೆ ಟೀಂ ಇಂಡಿಯಾ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು ಇಂಗ್ಲೆಂಡ್ ವನಿತಾ ತಂಡಕ್ಕೆ ಬರೋಬ್ಬರಿ 334 ರನ್ ಟಾರ್ಗೆಟ್ ನೀಡಿದೆ.

ಆರಂಭಿಕರಾಗಿ ಕಣಕ್ಕಿಳಿದಿದ್ದ ಶೇಫಾಲಿ ವರ್ಮಾ ಕೇವಲ 8 ರನ್ ಗಳಿಸಿ ಕೇಟ್ ಕ್ರಾಸ್ ಬೌಲಿಂಗ್​ನಲ್ಲಿ ಕ್ಲೀನ್ ಬೌಲ್ಡ್ ಆದರು. ಈ ಮೂಲಕ ಟೀಂ ಇಂಡಿಯಾಗೆ ಆಂಗ್ಲ ವನಿತೆಯರು ಆರಂಭಿಕ ಆಘಾತ ನೀಡಿದಿರು. ಆ ಬಳಿಕ ಮತ್ತೊರ್ವ ಆರಂಭಿಕ ಆಟಗಾರ್ತಿ ಸ್ಮೃತಿ ಜೊತೆಗೂಡಿದ ಯಾಸ್ತಿಕ ಭಾಟಿಯಾ ತಂಡದ ಸ್ಕೋರ್ ಅನ್ನು ಅರ್ಧಶತಕ ದಾಟಿಸಿದರು. ಒಂದು ಹಂತದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಈ ಜೋಡಿಯ ಜೊತೆಯಾಟವನ್ನು ಆಂಗ್ಲ ಬೌಲರ್ ಚಾರ್ಲಿ ಡೀನ್ ಮುರಿಯುವಲ್ಲಿ ಯಶಸ್ವಿಯಾದರು. 26 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಯಾಸ್ತಿಕ ಬೌಲರ್​ಗೆ ಕ್ಯಾಚಿತ್ತು ನಿರ್ಗಮಿಸಿದರು. 

ಆ ಬಳಿಕ ಹರ್ಮನ್ ಜೊತೆಗೂಡಿದ ಹರ್ಲೀನ್ ಡಿಯೋಲ್ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದರು. ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವ ಹಾದಿ ಹಿಡಿದಿದ್ದ ಹರ್ಲೀನ್ ಡಿಯೋಲ್, 58 ರನ್​ ಗಳಿದ್ದಾಗ ಕ್ಯಾಚಿತ್ತು ನಿರ್ಗಮಿಸಿದರು. ಆದರೆ ಒಂದು ಬದಿಯಲ್ಲಿ ಭದ್ರವಾಗಿ ಬೇರೂರಿದ್ದ ನಾಯಕಿ ತನ್ನ ನೈಜ ಆಟವನ್ನು ಮುಂದುವರೆಸಿದರು.

ಕೊನೆಯ ಹಂತದಲ್ಲಿ ನಾಯಕಿಗೆ ಉತ್ತಮ ಸಾಥ್ ನೀಡಿದ ಪೂಜಾ 18 ರನ್ ಸಿಡಿಸಿದರೆ, ದೀಪ್ತಿ ಶರ್ಮಾ ಕೂಡ 2 ಬೌಂಡರಿ ಸಹಿತ 15 ರನ್ ಚಚ್ಚಿದರು. ಈ ಮೂಲಕ ಭಾರತ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು 334 ರನ್ ಟಾರ್ಗೆಟ್ ನೀಡಿತು. ಈಗಾಗಲೇ ಸರಣಿಯಲ್ಲಿ ಮೊದಲನೇ ಪಂದ್ಯ ಗೆದ್ದಿರುವ ಟೀಂ ಇಂಡಿಯಾ 2ನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಆಂಗ್ಲರ ನಾಡಿನಲ್ಲಿ ಬರೋಬ್ಬರಿ 23 ವರ್ಷಗಳ ಬಳಿಕ ಏಕದಿನ ಸರಣಿ ಗೆದ್ದ ದಾಖಲೆ ಮಾಡುವ ಹೊಸ್ತಿಲಿನಲ್ಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ