ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Weather Alert :ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿತ್ತಿರುವ ಉಷ್ಣಾಂಶ; ಬಿಸಿ ಗಾಳಿ ಮತ್ತಷ್ಟು ಏರಿಕೆಯಾಗುವ. ಸಾಧ್ಯತೆ..!

Twitter
Facebook
LinkedIn
WhatsApp
Weather Alert :ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿತ್ತಿರುವ ಉಷ್ಣಾಂಶ; ಬಿಸಿ ಗಾಳಿ ಮತ್ತಷ್ಟು ಏರಿಕೆಯಾಗುವ. ಸಾಧ್ಯತೆ..!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಯ ವಾತಾವರಣ (Weather Alert) ಹೆಚ್ಚಾಗುತ್ತಲೇ ಇದೆ. ಇಂದು (ಫೆಬ್ರವರಿ 12, ಸೋಮವಾರ) ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಬಿಸಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

 

ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ.   ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ.

ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶ ಹೆಚ್ಚಳವಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್ ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳ ಕಂಡಿದೆ. 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಡಿಮೆ ಉಷ್ಣಾಂಶ ಚಿಕ್ಕನಹಳ್ಳಿಯಲ್ಲಿ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

 

ಬೇಸಿಗೆ ಆರಂಭವಾಗುವ ಮಾರ್ಚ್ ತಿಂಗಳಿಗೂ ಮುನ್ನ ಫೆಬ್ರವರಿ ತಿಂಗಳ ಆರಂಭದಲ್ಲೇ ತಾಪಮಾನ ಏರಿಕೆಯಾಗಿದೆ. ಇಡೀ ರಾಜ್ಯದಲ್ಲೇ ಉಷ್ಣಾಂಶ ಹೆಚ್ಚಳವಾಗುತ್ತಿದ್ದು, ಜನತೆ ಸೆಖೆಯೊಂದಿಗೆ ಹೆಣಗುತ್ತಿದ್ದಾರೆ. ಈಗಾಲೇ ಹೀಗಾದರೆ ಮಾರ್ಚ್, ಏಪ್ರಿಲ್ ತಿಂಗಳಲ್ಲಿ ತಾಪಮಾನ ಹೇಗಿರಬಹುದು ಎಂದು ಊಹಿಸಿಕೊಂಡರೆ ಭಯವಾಗುತ್ತದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಗಗನದ ಅಂಚಿನಲ್ಲಿ ಕೋಲ್ಮಿಂಚು ಮೂಡಿದಂತೆ ಈ ವರ್ಷ ಮಳೆಗಾಲ ಮಾರ್ಚ್ ತಿಂಗಳಲ್ಲೇ ಆರಂಭವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಯಿಂದ ಕಂಗೆಟ್ಟಿರುವ ಜನರಿಗೆ ಇದು ಕೊಂಚ ನೆಮ್ಮದಿಯ ಸುದ್ದಿಯಾಗಿದೆ. ಹವಾಮಾನ ಸಂಸ್ಥೆಗಳೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಗಾಲ ಆರಂಭವಾಗುವ ನಿರೀಕ್ಷೆಯಿದೆ ಎಂದು ಹೇಳುತ್ತಿವೆ.

 

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist