ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು..!

Twitter
Facebook
LinkedIn
WhatsApp
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ; ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು..!

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ.

ಅಬ್ದುಲ್​ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ ರಾಮೇಶ್ವರಂ ಕೆಫೆ, ಭಾರತದಾದ್ಯಂತ ಬ್ರಾಂಚ್​ಗಳನ್ನ ಹೊಂದಿದೆ. ರಾಮೇಶ್ವರಂ ಕೆಫೆ ದೇಗುಲದ ಕಾನ್ಸೆಪ್ಟ್​ನಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲೂ ಹಲವು ಬ್ರಾಂಚ್​ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್​ ಫೇವರೆಟ್ ಕೂಡ ಆಗಿದೆ. ಇಂತಹ ಕೆಫೆಯಲ್ಲಿ ನಿನ್ನೆ(01) ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ ಆಗಿದೆ. ವಿವಿಧ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೃಷ್ಣಾದಲ್ಲಿ ಸಿದ್ದರಾಮಯ್ಯ ಸಭೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್​, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರು ಭಾಗಿಯಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸ್ಥಳದಲ್ಲಿ ಬಾಂಬ್ ಸ್ಯಾಂಪಲ್‌ಗಳ ಸಂಗ್ರಹ  ಘಟನೆಯಲ್ಲಿ ಗಾಯಗೊಂಡ 9 ಜನರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದ್ದಾರೆ. ಸದ್ಯ ಯಾರ ಪ್ರಾಣಕ್ಕೂ ತೊಂದರೆ ಇಲ್ಲ. ಸ್ಥಳದಲ್ಲಿ ಬಾಂಬ್ ಸ್ಯಾಂಪಲ್‌ಗಳನ್ನು ಸಂಗ್ರಹ ಮಾಡಲಾಗಿದೆ. ಸದ್ಯಕ್ಕೆ ಯಾವುದೇ ಮಾಹಿತಿ ಬಂದಿಲ್ಲ. ಇಲಾಖೆಯ ವರದಿ ಬರುವ ತನಕ ಏನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ